ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣದ ವ್ಯಾಪಕ ಪ್ರಚಾರ ಅಗತ್ಯ: ಜಾವೇದ್ ಅಖ್ತರ್

ಉಡುಪಿ: ಕೋವಿಡ್ ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದಾದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣದ ಮೂಲಕ ವ್ಯಾಪಕ ಪ್ರಚಾರ ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ವಾರ್ತಾ ಇಲಾಖೆಯ ಆಯುಕ್ತರು, ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಮಾತನಾಡಿದರು. ಸರ್ಕಾರವು ಕೊರೊನಾ ನಿಯಂತ್ರಣಕ್ಕೆ ಜಾರಿಗೊಳಿಸಿರುವ ನಿಯಮಾವಳಿಗಳ ಅರಿವು ಮೂಡಿಸುವ ಕಾರ್ಯ ತಳಮಟ್ಟದಿಂದ ಆಗಬೇಕಿದೆ ಎಂದರು. ಮಾಧ್ಯಮಗಳು […]