ನೈತಿಕ ಜವಾಬ್ದಾರಿ ಮರೆತು ವೈಯಕ್ತಿಕ ದಾಳಿ ಮಾಡುತ್ತಿರುವ ಪಬ್ಲಿಕ್ ಟಿವಿ: ನಟ ರಕ್ಷಿತ್ ಶೆಟ್ಟಿ ಆಕ್ರೋಶ
ಬೆಂಗಳೂರು: ಕನ್ನಡದ ಸುದ್ದಿ ವಾಹಿನಿಯೊಂದು ತನ್ನ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿ ನನ್ನ ತೇಜೋವಧೆ ಮಾಡಿದೆ ಎಂದು ನಟ ರಕ್ಷಿತ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಂದು ಟ್ವೀಟ್ ಮಾಡಿರುವ ಅವರು, ನಿಮ್ಮದು ’ಟಿಆರ್ ಪಿ’ ಗೋಸ್ಕರ ಇರುವ ನ್ಯೂಸ್ ಚಾನೆಲ್. ಅದೇ ನಿಮ್ಮ ಅಸ್ತ್ರ. ನನ್ನ ಬಳಿ ಇರುವ ಅಸ್ತ್ರ ಕೆಲಸದ ಮೇಲಿರೋ ನನ್ನ ಶ್ರದ್ಧೆ, ಜೀವನದಲ್ಲಿ ಅಳವಡಿಸಿಕೊಂಡಿರುವ ನೀತಿ, ನನ್ನ ಸಿನಿಮಾ ಹಾಗೂ ಜನಬೆಂಬಲ. ಇವೆರಡರಲ್ಲಿ ಜಯ ಯಾರಿಗೆ ಎಂದು ನೋಡಿ […]