ಎಸ್ಸೆಸ್ಸೆಲ್ಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಗೊಂಡಿದೆ. ಜೂನ್ 14ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿವೆ. ಇಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ವೇಳಾಪಟ್ಟಿ ಘೋಷಣೆ ಮಾಡಿದರು. ಜೂನ್ 14ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದೆ. ಜೂ.14ರಿಂದ ಜೂ.25ರವರೆಗೆ ಪರೀಕ್ಷೆಗಳು ನಡೆಯಲಿದೆ ಎಂದು ತಿಳಿಸಿದರು. ಜೂನ್ 14ರಂದು ಪ್ರಥಮ ಭಾಷೆ, ಜೂ.16 ಗಣಿತ, ಸಮಾಜ ಶಾಸ್ತ್ರ, ಜೂ.18 ದ್ವಿತೀಯ ಭಾಷೆ, ಜೂ. 21 ವಿಜ್ಞಾನ, ಜೂ.23 ತೃತೀಯ ಭಾಷೆ, ಜೂ.25 ಸಮಾಜ ವಿಜ್ಞಾನ […]