ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠೆ ಹಾಗೂ ಉಡುಪಿ ಪರ್ಯಾಯ ಮಹೋತ್ಸವ ದಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪೂರ್ವಸಿದ್ಧತಾ ಪರೀಕ್ಷೆಯ ಶಿಕ್ಷೆ: ಪರೀಕ್ಷೆ ಮುಂದೂಡಲು ಮನವಿ
ಉಡುಪಿ: ಈಗಾಗಲೇ ಬಿಡುಗಡೆಗೊಳಿಸಿರುವ ಜಿಲ್ಲಾಮಟ್ಟದ ದ್ವಿತೀಯ ಪಿಯುಸಿ ಪೂರ್ವಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯ ಪ್ರಕಾರ ನಾಡಹಬ್ಬ ಉಡುಪಿ ಪರ್ಯಾಯ ಜನವರಿ 17 ಹಾಗೂ ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣಪ್ರತಿಷ್ಠೆ ನಡೆಯಲಿರುವ ಜನವರಿ 22 ರಂದೆ ಪರೀಕ್ಷೆ ನಡೆಯಲಿದೆ. ಇದರಿಂದ ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ತೊಂದರೆಯಾಗಲಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡುವಂತೆ ರಾಷ್ಟ್ರೀಯ ಪದವಿ ಪೂರ್ವ ವಿದ್ಯಾರ್ಥಿಗಳ ಪೋಷಕರ ಹಾಗೂ ಶಿಕ್ಷಕರ ಸಂಘದ ಸಂಸ್ಥಾಪಕ ಮಿಥೇಶ್ ಕುಮಾರ್ ಮೂಡುಕೊಣಾಜೆ ಉಡುಪಿ ಜಿಲ್ಲಾಧಿಕಾರಿ ಹಾಗೂ ಪದವಿ ಪೂರ್ವ […]