ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ಫಲಿತಾಂಶ ಇಂದು ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಫಲಿತಾಂಶ 2023 ಅನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಇಂದು ಪ್ರಕಟಿಸಿದೆ. ಮೇ ಮತ್ತು ಜೂನ್ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಪೂರಕ ಪರೀಕ್ಷೆಯಲ್ಲಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿಯ ಪೂರಕ ಪರೀಕ್ಷೆಯಲ್ಲಿ ಶೇ.32 ರಷ್ಟು ಫಲಿತಾಂಶ ಬಂದಿದೆ. ಪರೀಕ್ಷೆಯನ್ನು ಬರೆದ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯವನ್ನು ನಮೂದಿಸುವ ಮೂಲಕ […]