ಹಳ್ಳಾಡಿ ಜಯರಾಮ ಶೆಟ್ಟರಿಗೆ ಪುಂಡಲೀಕ ಹಾಲಂಬಿ ಪ್ರಶಸ್ತಿ ಪ್ರದಾನ

ಉಡುಪಿ: ಹಳ್ಳಾಡಿ ಜಯರಾಮ ಶೆಟ್ಟಿ ಅವರಂತಹ ಹಿರಿಯ ಯಕ್ಷಗಾನ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಿರುವುದು ಸಂತೋಷ ತಂದಿದೆ. ಅವರಿಗೆ ಪುಂಡಲೀಕ ಹಾಲಂಬಿ ಪ್ರಶಸ್ತಿ ನೀಡಿರುವುದು ನೈಜ ಸಾಧಕನಿಗೆ ಸಂದ ಗೌರವವಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಶನಿವಾರ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನ ಕಲಾಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪುಂಡಲೀಕ ಹಾಲಂಬಿ ಅವರ ಧರ್ಮಪತ್ನಿ ಜಿ. […]