ಪ್ರಧಾನಿ ಮೋದಿ ಭೇಟಿ ಮಾಡಿದ ಕನ್ನಡ ಚಿತ್ರರಂಗದ ಕಲಾವಿದರು
ಬೆಂಗಳೂರು: ಕನ್ನಡ ಚಿತ್ರರಂಗದ ದಿಗ್ಗಜ ನಟರಾದ ಯಶ್, ರಿಷಬ್ ಶೆಟ್ಟಿ, ವಿಜಯ್ ಕಿರಗಂದೂರು, ಬ್ಲಾಗರ್ ಅಯ್ಯೋ ಶ್ರದ್ಧಾ ಮತ್ತು ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಇಂಡಿಯಾ ಪವಿಲಿಯನ್ ನಲ್ಲಿ ಏರೋ ಶೋನಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದು ಈ ಸಂದರ್ಭ ಭೇಟಿ ನಡೆದಿದೆ. ಪ್ರಧಾನಿ ಮೋದಿಯವರನ್ನು ಭೇಟಿಯಾದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಯಶ್, ಮೋದಿಯವರ ಬಳಿ ಚಿತ್ರೋದ್ಯಮದ ಬಗ್ಗೆ ಹಲವಾರು ವಿಷಯಗಳ ಬಗ್ಗೆ ಚರ್ಚಿಸಿರುವುದಾಗಿ ತಿಳಿಸಿದ್ದಾರೆ. […]
ಪುನೀತ್ ರಾಜ್ ಕುಮಾರ್ ನೆನಪಿಗಾಗಿ ಅರಮನೆ ಮೈದಾನದಲ್ಲಿ ಪುನೀತ ಪರ್ವ: ಭಾರತೀಯ ಚಿತ್ರರಂಗದ ದಿಗ್ಗಜರು ಭಾಗವಹಿಸುವ ನಿರೀಕ್ಷೆ
ಅಪ್ಪು ಕಣ್ಮರೆಯಾಗಿ ಒಂದು ವರ್ಷವಾಗುತ್ತಾ ಬಂದಿದ್ದು, ಅವರ ಪುಣ್ಯ ಸ್ಮರಣೆಯ ಒಂದು ದಿನಕ್ಕೂ ಮುನ್ನ ಅಕ್ಟೋಬರ್ 28ರಂದು ‘ಗಂಧದ ಗುಡಿ’ ಚಿತ್ರಮಂದಿರಗಳಲ್ಲಿ ಬಿಡುಗಡೆ ಕಾಣುತ್ತಿದೆ. ವನ್ಯಜೀವಿ ಛಾಯಾಗ್ರಾಹಕ ಅಮೋಘ ವರ್ಷ ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ನೈಜ ಜೀವನದ ಪುನೀತ್ ರಾಜ್‍ಕುಮಾರ್ ಆಗಿ ಅಪ್ಪು ಕಾಣಿಸಿಕೊಂಡಿದ್ದಾರೆ. ಚಿತ್ರ ಬಿಡುಗಡೆಯಾಗುವ ಹಿನ್ನೆಲೆಯಲ್ಲಿ ಅರಮನೆ ಮೈದಾನದಲ್ಲಿ ಅಕ್ಟೋಬರ್ 21ರ ಶುಕ್ರವಾರ ಚಿತ್ರದ ಬಿಡುಗಡೆ ಪೂರ್ವ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮಕ್ಕೆ ‘ಪುನೀತ ಪರ್ವ’ ಎಂದು ಹೆಸರಿಡಲಾಗಿದೆ. ಈ ಪುನೀತ ಪರ್ವ ಕಾರ್ಯಕ್ರಮಕ್ಕೆ […]
ಅಪ್ಪು ಗಂಧದಗುಡಿಗೆ ಶುಭ ಹಾರೈಸಿದ ಪ್ರಧಾನಿ ಮೋದಿ
ಅಪ್ಪು ಜಗತ್ತಿನಾದ್ಯಂತ ಲಕ್ಷಾಂತರ ಹೃದಯಗಳಲ್ಲಿ ನೆಲೆಸಿದ್ದಾರೆ. ಅವರು ತೇಜಸ್ಸಿನ ಪ್ರತೀಕ, ಚೈತನ್ಯದ ಚಿಲುಮೆ ಮತ್ತು ಸರಿಸಾಟಿಯಿಲ್ಲದ ಪ್ರತಿಭಾವಂತರಾಗಿದ್ದರು. ‘ಗಂಧದ ಗುಡಿ’ ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಹಾಗು ಪರಿಸರ ಸಂರಕ್ಷಣೆಗೆ ಸಲ್ಲಿಸಲಾದ ಗೌರವ. ಈ ಪ್ರಯತ್ನಕ್ಕೆ ನನ್ನ ಶುಭ ಹಾರೈಕೆಗಳು ಎಂದು ಪ್ರಧಾನಿ ಮೋದಿ ಟ್ವೀಟಿಸಿದ್ದಾರೆ. ಅಶ್ವಿನಿ ಪುನೀತ್ ರಾಜ್ ಕುಮಾರ್ ಗಂಧದ ಗುಡಿ ಚಿತ್ರ ಬಿಡುಗಡೆ ಬಗ್ಗೆ ಪ್ರಧಾನಿ ಮೋದಿ ಅವರನ್ನು ಟ್ಯಾಗ್ ಮಾಡಿ ಟ್ವೀಟಿಸಿದ್ದರು. ನಮಸ್ತೆ ನರೇಂದ್ರ ಮೋದಿ ಅವರೇ, ಅಪ್ಪು ಅವರ […]
ಅಕ್ಟೋಬರ್ 28 ರಂದು ತೆರೆಗಪ್ಪಳಿಸಲಿದೆ ಗಂಧದ ಗುಡಿ: ಇದು ದೊಡ್ಮನೆ ಹುಡುಗ ಪುನೀತ್ ರಾಜ್ ಕುಮಾರ್ ಅವರ ಕೊನೆ ಚಿತ್ರ
ನಟ ಪುನೀತ್ ರಾಜ್‌ಕುಮಾರ್ ಅವರ ಕೊನೆಯ ಚಿತ್ರ ಗಂಧದ ಗುಡಿ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಅಮೋಘವರ್ಷ ನಿರ್ದೇಶನದ ಸಾಕ್ಷ್ಯಚಿತ್ರ ಅಕ್ಟೋಬರ್ 28 ರಂದು ತೆರೆ ಮೇಲೆ ಬರಲಿದೆ. ಬಿಡುಗಡೆ ದಿನಾಂಕದ ಅಧಿಕೃತ ಪ್ರಕಟಣೆಯನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ತಮ್ಮ ಟ್ವಿಟರ್ ಹ್ಯಾಂಡಲ್ ಮೂಲಕ ಹಂಚಿಕೊಂಡಿದ್ದಾರೆ. “ತನ್ನ ಮೇಲೆ ಅಪಾರ ಪ್ರೀತಿಯನ್ನು ಧಾರೆಯೆರೆದ ಭೂಮಿಗೆ ಗೌರವವಾಗಿ ಕರ್ನಾಟಕದ ಕಾಡುಗಳನ್ನು ಪುನೀತ್ ಆಗಿಯೇ ಅನ್ವೇಷಿಸುತ್ತಾರೆ. ಈ ಚಿತ್ರದಲ್ಲಿ ಚಿತ್ರಕಥೆಯಿಲ್ಲದ ನೈಜ ಪುನೀತ್ ಅವರನ್ನು ಅಭಿಮಾನಿಗಳು ಕಾಣಬಹುದು” ಎಂದು ಅಶ್ವಿನಿ ಹೇಳಿದ್ದಾರೆ. […]