ಅಪ್ಪ ಮಗನ ಅಪೂರ್ವ ಸಂಗಮದ ಪೋಸ್ಟರ್; ಚಿತ್ರ ಕ್ಕೆ ತೆರಿಗೆ ವಿನಾಯಿತಿ; ಗಂಧದಗುಡಿ ಎಲ್ಲಾ ದಾಖಲೆಗಳನ್ನೂ ಪುಡಿಗಟ್ಟಲಿ ಎಂದ ಯಶ್
ಬೆಂಗಳೂರು: ಸಸ್ಯ ಮತ್ತು ಪ್ರಾಣಿಗಳ ರಕ್ಷಣೆ ಮತ್ತು ಸಂರಕ್ಷಣೆಯನ್ನು ಆಧರಿಸಿದ ದಿವಂಗತ ಪುನೀತ್ ರಾಜ್‌ಕುಮಾರ್ ಅಭಿನಯದ ಕನ್ನಡ ಸಾಕ್ಷ್ಯಚಿತ್ರ ‘ಗಂಧದ ಗುಡಿ’ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಇದು ಅಪ್ಪು ನಟನೆಯ ಕೊನೆಯ ಚಿತ್ರವಾಗಿದೆ. ಈ ಮಧ್ಯೆ ಅಪ್ಪು ಮತ್ತು ವರನಟ ಡಾ. ರಾಜ್ ಕುಮಾರ್ ಅವರ ಚಿತ್ರಗಳನ್ನೊಳಗೊಂಡ ಪೋಸ್ಟರ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಅಪ್ಪ-ಮಗ ಇಬ್ಬರೂ ಗಂಧದಗುಡಿ ಎನ್ನುವ ಹೆಸರಿನ ಚಿತ್ರದಲ್ಲಿ ನಟಿಸಿದ್ದು, ದುರಾದೃಷ್ಟವಶಾತ್ ಈ […]