ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಗೆ ಭಾರೀ ಹೃದಯಾಘಾತ: ಆರೋಗ್ಯ ಸ್ಥಿತಿ ಚಿಂತಾಜನಕ
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರಿಗೆ ಭಾರೀ ಹೃದಯಾಘಾತ ಸಂಭವಿಸಿದ್ದು, ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಪುನೀತ್ ಆರೋಗ್ಯ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಬೆಳಿಗ್ಗೆ ಪುನೀತ್ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ಅಲ್ಲೇ ಕುಸಿದು ಬಿದ್ದಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಪುನೀತ್ ಜೀವಣ್ಮರಣ ಹೋರಾಟದಲ್ಲಿದ್ದಾರೆ ಎಂದು ತಿಳಿದುಬಂದಿದೆ.