ನಟ ಪುನೀತ್ ರಾಜ್ ಕುಮಾರ್ ಗೆ ಹೃದಯಸ್ಪರ್ಶಿ ವಿದಾಯ: ಭೂತಾಯಿ ಮಡಿಲು ಸೇರಿದ ಕನ್ನಡದ ಕಣ್ಮಣಿ “ಅಪ್ಪು”

ಬೆಂಗಳೂರು: ಕನ್ನಡದ ಖ್ಯಾತ ನಟ ಪವರ್​ಸ್ಟಾರ್​ ಪುನೀತ್​ ರಾಜ್​ಕುಮಾರ್​ ಅವರ ಅಂತ್ಯಕ್ರಿಯೆಯು ಇಂದು ಬೆಳಿಗ್ಗೆ ಕಂಠೀರವ ಸ್ಟುಡಿಯೋದಲ್ಲಿ ಸಕಲ ವಿಧಿವಿಧಾನಗಳೊಂದಿಗೆ ನೆರವೇರಿತು. ಡಾ.ರಾಜ್​​ಕುಮಾರ್ ಸಮಾಧಿಯ ಪಕ್ಕದಲ್ಲೆ ಪುನೀತ್​ ಅಂತ್ಯಕ್ರಿಯೆ ನಡೆಸಲಾಯಿತು. ಕುಶಾಲತೋಪು ಸಿಡಿಸಿ, ರಾಷ್ಟ್ರಗೀತೆ ಮೂಲಕ ಪುನೀತ್​ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು. ಇನ್ನು ಈಡಿಗ ಸಮುದಾಯದ ಸಂಪ್ರದಾಯದಂತೆ ಪುನೀತ್​​ ಅಂತ್ಯಕ್ರಿಯೆ ನಡೆದಿದ್ದು, ರಾಘವೇಂದ್ರ ರಾಜ್​ಕುಮಾರ್ ಹಿರಿಯ ಪುತ್ರ ವಿನಯ್​​ ರಾಜ್​ಕುಮಾರ್ ಅಂತಿಮ ವಿಧಿವಿಧಾನ ಕಾರ್ಯವನ್ನು ರಾಣೆಬೆನ್ನೂರಿನ ಶರಣಬಸವೇಶ್ವರ ಮಠದ ಡಾ. ಪರಮಾನಂದ ಸ್ವಾಮೀ […]

ಇಂದಲ್ಲ, ನಾಳೆ ನಟ ಪುನೀತ್​​ ರಾಜ್​ಕುಮಾರ್ ಅಂತ್ಯಕ್ರಿಯೆ

ಬೆಂಗಳೂರು: ನಟ ಪುನೀತ್​​ ರಾಜ್​ಕುಮಾರ್ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು, ನಾನು ರಾಘಣ್ಣ ಹಾಗೂ ಶಿವರಾಜ್​ಕುಮಾರ್​ ಜೊತೆ ಮಾತನಾಡಿದೆ. ಪುನೀತ್​ ಅವರ ಅಭಿಮಾನಿಗಳು ಲಕ್ಷ ಲಕ್ಷ ಸಂಖ್ಯೆಯಲ್ಲಿ  ಹರಿದು ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು. ಸರ್ಕಾರ ಹಾಗೂ ಡಾ.ರಾಜ್​ ಕುಟುಂಬದ ತೀರ್ಮಾನದಂತೆ ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಪುನೀತ್​ ಅವರ ಅಂತ್ಯಕ್ರಿಯೆ ನೆರವೇರಲಿದೆ. ಕಂಠೀರವ ಸ್ಟೇಡಿಯಂನಲ್ಲಿರುವ […]

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಧಿವಶ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು. ಪುನೀತ್ ಇಂದು ಬೆಳಿಗ್ಗೆ ಜಿಮ್ ನಲ್ಲಿ‌ ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಸ್ಥಳೀಯ ರಮಣೀ ಆಸ್ಪತ್ರೆಗೆ ದಾಖಲಾಗಿಸಿತ್ತು. ಅಲ್ಲಿಂದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪುನೀತ್ ಇಹಲೋಕ ತ್ಯಜಿಸಿದ್ದಾರೆ.

ನಟ ಪುನೀತ್ ರಾಜ್ ಕುಮಾರ್ ಆರೋಗ್ಯ ಸ್ಥಿತಿ‌ ತೀರ ಗಂಭೀರ: ವಿಕ್ರಮ್ ಆಸ್ಪತ್ರೆ ಎದುರು ಜನಸ್ತೋಮ

ಬೆಂಗಳೂರು: ನಟ ಪುನೀತ್ ರಾಜ್‍ಕುಮಾರ್ ಅವರ ಕ್ಷಣದಿಂದ ಕ್ಷಣಕ್ಕೆ ಕ್ಷೀಣಿಸುತ್ತಿದೆ. ಚಿಕಿತ್ಸೆ ನೀಡುತ್ತಿರುವ ವಿಕ್ರಮ್ ಆಸ್ಪತ್ರೆ ಎದುರು ಜನಸ್ತೋಮ ಸೇರಿದೆ. ಇಂದು ಬೆಳಿಗ್ಗೆ ಜಿಮ್‌ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್‍ಕುಮಾರ್ ಕುಸಿದು ಬಿದ್ದಿದ್ದರು. ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿಂದ ವಿಕ್ರಮ್ ಆಸ್ಪತ್ರೆಗೆ ಕರೆತರಲಾಗಿದೆ. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಆರೋಗ್ಯ ಸ್ಥಿತಿ ತೀರ ಗಂಭೀರವಾಗಿದೆ. ಅವರ ಆರೋಗ್ಯದ ಬಗ್ಗೆ ಒಂದು ಗಂಟೆ ಬಳಿಕ ನಿಖರ ಮಾಹಿತಿ ನೀಡಲಾಗುವುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಅವರ […]