ಪುಣ್ಯಕೋಟಿ ದತ್ತು ಸ್ವೀಕಾರ ಯೋಜನೆಗೆ ನಟ ಕಿಚ್ಚ ಸುದೀಪ್ ರಾಯಭಾರಿ
ಬೆಂಗಳೂರು: ಗೋಶಾಲೆಯಲ್ಲಿ ರಕ್ಷಿಸಲ್ಪಟ್ಟ ಅನಾಥ ಗೋವುಗಳ ಪಾಲನೆ, ಪೋಷಣೆಗೆ ನೆರವಾಗುವ ನಿಟ್ಟಿನಲ್ಲಿ ಜಾರಿಮಾಡಲಾದ ಸರ್ಕಾರದ ಮಹತ್ವಾಕಾಂಕ್ಷೆಯ ಪುಣ್ಯಕೋಟಿ ದತ್ತು ಯೋಜನೆಗೆ ಸುಪ್ರಸಿದ್ಧ ನಟ ಕಿಚ್ಚ ಸುದೀಪ್ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಈ ಬಗ್ಗೆ ಪಶು ಸಂಗೋಪನಾ ಇಲಾಖೆ ಸಚಿವ ಪ್ರಭು ಚವ್ಹಾಣ್ ಮಾಹಿತಿ ಹಂಚಿಕೊಂಡಿದ್ದಾರೆ. “ಗೋಶಾಲೆಯಲ್ಲಿ ರಕ್ಷಿಸಲ್ಪಟ್ಟ ಅನಾಥ ಗೋವುಗಳ ಪಾಲನೆ – ಪೋಷಣೆಗೆ ನೆರವಾಗುವ ನಿಟ್ಟಿನಲ್ಲಿ ಜಾರಿಮಾಡಲಾದ ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ “ಪುಣ್ಯಕೋಟಿ ಯೋಜನೆ”ಯ ರಾಯಭಾರಿಯಾದ ಸುಪ್ರಸಿದ್ಧ ನಟ, ಅಭಿನಯ ಚಕ್ರವರ್ತಿ ಶ್ರೀ ಕಿಚ್ಚ ಸುದೀಪ್ ಅವರಿಗೆ […]
ಜುಲೈ 28 ರಂದು ‘ಪುಣ್ಯಕೋಟಿ ದತ್ತು ಯೋಜನೆ’ಗೆ ಚಾಲನೆ: ದೇಶದಲ್ಲೇ ಪ್ರಥಮ ಪ್ರಯತ್ನಕ್ಕೆ ರಾಜ್ಯ ಸರ್ಕಾರದಿಂದ ಸ್ಪಂದನೆ
ಬೆಂಗಳೂರು: ಗೋಶಾಲೆಗಳಿಂದ ಜಾನುವಾರುಗಳನ್ನು ದತ್ತು ಪಡೆಯುವುದನ್ನು ಉತ್ತೇಜಿಸಲು ರಾಜ್ಯ ಸರ್ಕಾರವು ಜುಲೈ 28 ರಂದು ಹಸು ದತ್ತು ಯೋಜನೆಯನ್ನು ಪ್ರಾರಂಭಿಸಲಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಭಮಲಾ ಚವ್ಹಾಣ್ ಹೇಳಿದ್ದಾರೆ. ”ಜಾನುವಾರುಗಳನ್ನು ಸಂರಕ್ಷಿಸಲು ಗೋಶಾಲೆಗಳಲ್ಲಿ ಅವುಗಳನ್ನು ಸಾಕುವ ಮತ್ತು ಪೋಷಣೆ ಮಾಡುವ ಉದ್ದೇಶದಿಂದ ಸಾರ್ವಜನಿಕರು ಮತ್ತು ಖಾಸಗಿ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರವು ದೇಶದಲ್ಲೇ ಪ್ರಥಮ ಬಾರಿಗೆ ‘ಪುಣ್ಯಕೋಟಿ ದತ್ತು ಯೋಜನೆ’ ಆರಂಭಿಸಲು ಉತ್ಸುಕವಾಗಿದೆ” ಎಂದು ಅವರು ಹೇಳಿದ್ದಾರೆ. ಜುಲೈ 28ಕ್ಕೆ ಬಸವರಾಜ […]