ಜ.8: ಅದಮಾರು ಶ್ರೀಗಳ ಪುರಪ್ರವೇಶ-ಪೌರ ಸಮ್ಮಾನ ಸಮಾರಂಭ

ಉಡುಪಿ: ಅದಮಾರು ಮಠದ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಸಾಂಪ್ರದಾಯಿಕ ಪರ್ಯಾಯ ಸಂಚಾರ ಪೂರೈಸಿರುವ ಮಠದ ಕಿರಿಯ ಈಶಪ್ರಿಯ ಸ್ವಾಮೀಜಿ ಅವರ ಪುರಪ್ರವೇಶ ಹಾಗೂ ಪೌರಸನ್ಮಾನ ಸಮಾರಂಭ ಜ. 8ರಂದು ಉಡುಪಿ ರಥಬೀದಿಯ ಪೂರ್ಣಪ್ರಜ್ಞ ಮಂಟಪದಲ್ಲಿ ನಡೆಯಲಿದೆ ಎಂದು ಶ್ರೀಕೃಷ್ಣ ಸೇವಾ ಬಳಗದ ಗೌರವಾಧ್ಯಕ್ಷ ಶಾಸಕ ಕೆ. ರಘುಪತಿ ಭಟ್‌  ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅಂದು ಮಧ್ಯಾಹ್ನ 2.30ಕ್ಕೆ ನಗರದ ಜೋಡುಕಟ್ಟೆಗೆ ಆಗಮಿಸಲಿರುವ ಶ್ರೀಗಳಿಗೆ ಭವ್ಯ ಸ್ವಾಗತ ಕೋರಲಾಗುವುದು. ಬಳಿಕ ಅಲ್ಲಿಂದ ಮಠದವರೆಗೆ ಶ್ರೀಗಳ ಪುರಪ್ರವೇಶ ಮೆರವಣಿಗೆ ಹೊರಡಲಿದ್ದು, […]