ಪುಷ್ಪಾನಂದ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

ಉಡುಪಿ: ಮಂಗಳವಾರದಂದು ಅಲೆವೂರಿನ ಸಂಕಲ್ಪ ಸಭಾಭವನದಲ್ಲಿ ಪುಷ್ಪಾನಂದ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿಜೆಪಿ ಕಾಪು ಮಂಡಲದ ಅಧ್ಯಕ್ಷ ಶ್ರೀಕಾಂತ ನಾಯಕ್ ಅಲೆವೂರು, ಪುಷ್ಪಾನಂದ ಫೌಂಡೇಶನ್ ವತಿಯಿಂದ ಕಾಪು ಕ್ಷೇತ್ರದ 29 ಗ್ರಾಮಗಳ 2158 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ವಿತರಿಸುವ ಮೂಲಕ ಯಶ್‍ಪಾಲ್ ಸುವರ್ಣ ತಮ್ಮ ಸಾಮಾಜಿಕ ಬದ್ಧತೆಯನ್ನು ನಿರೂಪಿಸಿದ್ದಾರೆ. ಸಮಾಜ ಸೇವೆಯ ಸಂಕಲ್ಪದೊಂದಿಗೆ ಜಾತಿ ಮತ ಭೇದವಿಲ್ಲದೇ ಪ್ರತಿಭಾನ್ವಿತ ವಿದ್ಯಾರ್ಥಿಗಳ […]
ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಪುಷ್ಪಾನಂದ ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ

ಕಾಪು: ಕಾಪು ಪುರಸಭೆ ವ್ಯಾಪ್ತಿಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ 105 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುಷ್ಪಾನಂದ ಫೌಂಡೇಶನ್ ವತಿಯಿಂದ, ಕಾಪು ಲಕ್ಷ್ಮೀ ಜನಾರ್ಧನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪುರಸ್ಕಾರಗಳನ್ನು ವಿತರಿಸಲಾಯಿತು. ಪುಷ್ಪಾನಂದ ಫೌಂಡೇಶನ್ ಪ್ರವರ್ತಕ ಯಶ್ ಪಾಲ್ ಸುವರ್ಣ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ ಕುಮಾರ್ ಶೆಟ್ಟಿ, ಜ್ಯೋತಿಷ್ಯ ವಿದ್ವಾನ್ ಪ್ರಕಾಶ್ ಅಮ್ಮಣ್ಣಾಯ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಕಾಪು […]