ಪುತ್ತೂರು: ಪತ್ರಕರ್ತರ ಜೀವನ ಭದ್ರತೆಗಾಗಿ ₹ 34 ಲಕ್ಷ ಮೊತ್ತದ ಯೋಜನೆ ಘೋಷಣೆ

ಪುತ್ತೂರು: ರಾಜ್ಯದಲ್ಲೇ ಮೊದಲ ಬಾರಿಗೆ ಗ್ರಾಮೀಣ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿರುವ ಪತ್ರಕರ್ತರ ಜೀವನ ಭದ್ರತೆಗಾಗಿ ಪುತ್ತೂರು ತಾಲೂಕು ಪತ್ರಕರ್ತರ ಸಂಘವು ತನ್ನ ಸದಸ್ಯರಿಗೆ ₹ 34 ಲಕ್ಷ ಮೊತ್ತದ ಆರ್ಥಿಕ ಯೋಜನೆ ಘೋಷಿಸಿದೆ. ಈ ಯೋಜನೆ ಇಂದಿನಿಂದಲೇ ಅಧಿಕೃತವಾಗಿ ಜಾರಿಗೊಳ್ಳಲಿದೆ. ಇಂದು ಪುತ್ತೂರು ಪತ್ರಿಕಾಭವನದಲ್ಲಿ ನಡೆದ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ವಿಶೇಷ ಮಹಾಸಭೆಯಲ್ಲಿ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣ್ ಕುಮಾರ್ ನಾಳ ಈ ಬಗ್ಗೆ ಮಾಹಿತಿ ನೀಡಿದರು. ಪತ್ರಕರ್ತರ ಸಾಮಾಜಿಕ ಮತ್ತು ಕುಟುಂಬ ಭದ್ರತಾ […]