ಜ 24 ರಂದು ಪುತ್ತಿಗೆ ಪರ್ಯಾಯ ಸಮಾರೋಪದಲ್ಲಿ ಕುದ್ರೋಳಿ ಗಣೇಶ್ ತಂಡದಿಂದ ವಿಸ್ಮಯ ಜಾದೂ ಪ್ರದರ್ಶನ
ಉಡುಪಿ: ಪುತ್ತಿಗೆ ಪರ್ಯಾಯ ಮಹೋತ್ಸವದ ಸಾಂಸ್ಕ್ರತಿಕ ಸಪ್ತೋತ್ಸವದ ಸಮಾರೋಪದಲ್ಲಿ ಇಂಡಿಯಾಸ್ ಗಾಟ್ ಟ್ಯಾಲೆಂಟ್ ಫೈನಲಿಸ್ಟ್, ಸಚಿವರನ್ನೇ ಮಾಯ ಮಾಡಿದ ಖ್ಯಾತಿಯ ಅಂತರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್ ಹಾಗೂ ಬಳಗದವರಿಂದ ವಿಸ್ಮಯ ಜಾದೂ ಪ್ರದರ್ಶನಗೊಳ್ಳಲಿದೆ. ಜನವರಿ 24 ಬುಧವಾರದಂದು ರಾತ್ರಿ 7.30 ಕ್ಕೆ ಶ್ರೀ ಕ್ರಷ್ಣ ಮಠದ ರಾಜಾಂಗಣದಲ್ಲಿ ಜಾದೂ, ಜಾನಪದ, ರಂಗಭೂಮಿ ಹಾಗೂ ಸಂಗೀತಗಳ ಸಮ್ಮಿಲನದ ವಿಸ್ಮಯ ಜಾದೂ ವಿನೂತನ ಜಾದೂ ತಂತ್ರಗಳೊಂದಿಗೆ ಪ್ರೇಕ್ಷಕರನ್ನು ರಂಜಿಸಲಿದೆ. ಇಂಡಿಯಾಸ್ ಗಾಟ್ ಟ್ಯಾಲೆಂಟ್ ರಿಯಾಲಿಟಿ ಶೋ ಮೂಲಕ ವಿಶ್ವದಾದ್ಯಂತ ಪ್ರಸಿದ್ದಿಯಾದ […]
ಉಡುಪಿ ಕಾರ್ಸ್ ಇದರ 6ನೇ ವರ್ಷದ ವಾರ್ಷಿಕೋತ್ಸವ ಆಚರಣೆ
ಉಡುಪಿ: ಪುತ್ತಿಗೆ ಪರ್ಯಾಯದ ಶುಭ ಸಂದರ್ಭದಲ್ಲಿ ಉಡುಪಿ ಕಾರ್ಸ್ ಇದರ 6ನೇ ವರ್ಷದ ವಾರ್ಷಿಕೋತ್ಸವವನ್ನು ಜೋಡುಕಟ್ಟೆಯಲ್ಲಿರುವ ಉಡುಪಿ ಕಾರ್ಸ್ ಕಟ್ಟಡದಲ್ಲಿ ಗ್ರಾಹಕರೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು. ಕಳೆದ ಆರು ವರ್ಷಗಳಿಂದ ನಿರಂತರವಾಗಿ ಬೆಂಬಲ ನೀಡಿ ಸಹಕರಿಸಿದ ಗ್ರಾಹಕರಿಗೆ ಕೃತಜ್ಞತೆ ಸಲ್ಲಿಸಲಾಯಿತು. ಮಾಂಡವಿ ಬಿಲ್ಡರ್ಸ್ ನ ಎಂ.ಡಿ. ಜೆರಿ ವಿನ್ಸೆಂಟ್ ಡಯಾಸ್ ಕೇಕ್ ಕತ್ತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಡುಪಿ ಕಾರ್ಸ್ ಸಂಸ್ಥೆಯ ಸಂಸ್ಥಾಪಕ ಮೊಹಮ್ಮದ್ ಅಶ್ರಫ್ ಮತ್ತು ಜಿಯಾದ್ ಅಹಮದ್, ಸಿಬ್ಬಂದಿಗಳು ಹಾಗೂ ಗ್ರಾಹಕರು ಉಪಸ್ಥಿತರಿದ್ದರು.
ಪುತ್ತಿಗೆ ಶ್ರೀಗಳಿಂದ ಸರ್ವಜ್ಞ ಪೀಠಾರೋಹಣ
ಉಡುಪಿ: ಶ್ರೀ ಅದಮಾರು ಮಠದ ವಿಶ್ವಪ್ರಿಯ ತೀರ್ಥ ಸ್ವಾಮೀಜಿಗಳ ಸಮ್ಮುಖದಲ್ಲಿ ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಪಾದರು ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಐತಿಹಾಸಿಕ 4 ನೇ ಉಡುಪಿ ಶ್ರೀಕೃಷ್ಣ ಸರ್ವಜ್ಞ ಪೀಠಾರೋಹಣವನ್ನು ಬೆಳಿಗ್ಗೆ 6:10 ಕ್ಕೆ ಏರಿದರು. ಗುರುವಾರ ಪ್ರಾತಃಕಾಲ 1.30ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಪವಿತ್ರ ಸ್ನಾನ ಮಾಡಿ ಜೋಡುಕಟ್ಟೆಗೆ ಆಗಮಿಸಿದ ಪುತ್ತಿಗೆ ಶ್ರೀಗಳಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಅಲ್ಲಿಂದ ಜೋಡುಕಟ್ಟೆಗೆ ಆಗಮಿಸಿದ ಅವರು, ಪಟ್ಟದ ದೇವರಿಗೆ ಪೂಜೆ ಸಲ್ಲಿಸಿದರು. ಅವರನ್ನು ಮೆರವಣಿಗೆಯಲ್ಲಿ […]
ಜ.19 ರಿಂದ 25ರ ವರೆಗೆ “ಸಪ್ತಸಾಗರದಾಚೆ ಪುತ್ತಿಗೆ ಶ್ರೀಗಳ ದೈವಿಕ ಸಚಿತ್ರ ದಿನಚರಿ” ಛಾಯಾಚಿತ್ರ ಪ್ರದರ್ಶನ
ಉಡುಪಿ: ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿಗಳ ಚತುರ್ಥ ವಿಶ್ವಗೀತಾ ಪರ್ಯಾಯದ ಅಂಗವಾಗಿ “ಸಪ್ತಸಾಗರದಾಚೆ ಪುತ್ತಿಗೆ ಶ್ರೀಗಳ ದೈವಿಕ ಸಚಿತ್ರ ದಿನಚರಿ” ಛಾಯಾಚಿತ್ರ ಪ್ರದರ್ಶನ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜ. 18 ರಂದು ಉದ್ಘಾಟನೆಗೊಳ್ಳಲಿದೆ. ಕೊಡವೂರಿನ ಉಡುಪ ರತ್ನ ಪ್ರತಿಷ್ಠಾನದ ಸಹಯೋಗದೊಂದಿಗೆ ಈ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಗಿದೆ. ಉದಯವಾಣಿ ಪತ್ರಿಕೆಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಅವರು ತಮ್ಮ ಅಮೆರಿಕ ಪ್ರವಾಸದಲ್ಲಿ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಕುರಿತು ಸೆರೆಹಿಡಿದ ಛಾಯಾಚಿತ್ರಗಳನ್ನು ಇಲ್ಲಿ ಪ್ರಸ್ತುತ ಪಡಸಲಾಗುತ್ತಿದೆ. […]
ಆಂಧ್ರದ ಲೇಪಾಕ್ಷಿ ಮಂದಿರದಲ್ಲಿ ಪ್ರಧಾನಿ ಮೋದಿಗೆ ಪುತ್ತಿಗೆ ಪರ್ಯಾಯದ ಆಮಂತ್ರಣ
ಹೈದರಾಬಾದ್: ಐತಿಹಾಸಿಕ ಉಡುಪಿ ಶ್ರೀಕೃಷ್ಣ ಮಠದ ಪುತ್ತಿಗೆ ಪರ್ಯಾಯ ಮಹೋತ್ಸವದ ಆಹ್ವಾನ ಪತ್ರಿಕೆಯನ್ನು ಆಂಧ್ರಪ್ರದೇಶದ ಲೇಪಾಕ್ಷಿ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಲಾಯಿತು. 2008-10ರಲ್ಲಿ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದಾಗ ಸ್ವಾಮೀಜಿಯವರ 3ನೇ ಪರ್ಯಾಯದ ಸಂದರ್ಭದಲ್ಲಿ ತಾವು ಉಡುಪಿಗೆ ಭೇಟಿ ನೀಡಿದ್ದನ್ನು ಪ್ರಧಾನಿ ಸ್ಮರಿಸಿಕೊಂಡರು ಮತ್ತು ಸ್ವಾಮೀಜಿಗಳಿಗೆ ತಮ್ಮ ನಮಸ್ಕಾರಗಳನ್ನು ತಿಳಿಸಿದರು. ಮಂಗಳವಾರದಂದು ಆಂಧ್ರಪ್ರದೇಶದ ಲೇಪಾಕ್ಷಿಯಲ್ಲಿರುವ ವೀರಭದ್ರ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ ಸಂದರ್ಭದಲ್ಲಿ ಮಠದ ಪರವಾಗಿ ಅವರಿಗೆ ಆಹ್ವಾನ ಪತ್ರಿಕೆಯನ್ನು ನೀಡಿ ಆಮಂತ್ರಿಸಲಾಯಿತು. ಪ್ರಧಾನಿ […]