ರಾತ್ರಿ 8ರಿಂದ 4ರ ವರೆಗೆ ರಾಷ್ಟ್ರೀಯ ವಿಶ್ರಾಂತಿ ಸಮಯವೆಂದು ಘೋಷಿಸಿ: ಕೊರೊನಾ‌ ಮಣಿಸಲು ಪುತ್ತಿಗೆ ಶ್ರೀ‌ ಸಲಹೆ

ಉಡುಪಿ: ಕೊರೊನಾ ಸೋಂಕನ್ನು ಸಂಪೂರ್ಣವಾಗಿ ತಡೆಗಟ್ಟಲು ಲಾಕ್ ಡೌನ್ ಅಂಥ ಕಠಿಣ ನಿಯಮಗಳನ್ನು ಜಾರಿಗೊಳಿಸಬೇಕು. ಮನುಷ್ಯನ ಪ್ರತಿರೋಧ ಶಕ್ತಿ ಹೆಚ್ಚಿಸಲು ಪೂರಕವಾಗುವಂತೆ ರಾತ್ರಿ 8 ರಿಂದ ಬೆಳಗ್ಗೆ 4ರವರೆಗೆ ರಾಷ್ಟ್ರೀಯ ವಿಶ್ರಾಂತಿ ಸಮಯವೆಂದು ಘೋಷಿಸಬೇಕು ಎಂದು ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಕೇಂದ್ರ ಸರಕಾರವನ್ನು ಅಗ್ರಹಿಸಿದ್ದಾರೆ. ಕೊರೊನಾ ಸೋಂಕಿನಿಂದ ದೇಶದ ಆರೋಗ್ಯ ರಕ್ಷಣೆಗಾಗಿ ಈ ವಿಶ್ರಾಂತಿ ಸಮಯದಲ್ಲಿ ಯಾವುದೇ ಟಿವಿ ಪ್ರಸಾರ, ಮನೋರಂಜನಾ ಕಾರ್ಯಕ್ರಮಗಳನ್ನೆಲ್ಲಾ ನಿರ್ಬಂಧಿಸಬೇಕು. ವಿಶ್ರಾಂತಿ ಸಮಯಕ್ಕೆ ತೊಂದರೆಯಾಗುವ ರಾತ್ರಿ ಪ್ರಯಾಣಗಳನ್ನು ನಿಷೇಧಿಸಬೇಕು […]