ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
ಉಡುಪಿ: ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ಅವರು ಕೊರೊನಾದಿಂದ ಗುಣಮುಖರಾಗಿದ್ದು, ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ 12 ದಿನಗಳ ಕಾಲ ಚಿಕಿತ್ಸೆ ಪಡೆದು ಇಂದು ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಅವರು ನೇರವಾಗಿ ಹಿರಿಯಡಕ ಸಮೀಪದ ಪುತ್ತಿಗೆ ಮೂಲ ಮಠಕ್ಕೆ ತೆರಳಿದ್ದಾರೆ. ಶ್ರೀಗಳು ಆರೋಗ್ಯವಾಗಿದ್ದಾರೆ ಎಂದು ಮಠದ ಆಡಳಿತ ಮಂಡಳಿ ತಿಳಿಸಿದೆ. ಮುಂದಿನ ಹದಿನಾಲ್ಕು ದಿನಗಳ ಕಾಲ ಶ್ರೀಪಾದರಿಗೆ ವಿಶ್ರಾಂತಿಯ ಅಗತ್ಯವಿದೆ. ಹಾಗಾಗಿ ಶ್ರೀಗಳ ಆರೋಗ್ಯ ವಿಚಾರಿಸಲು ಭಕ್ತರು ಮಠಕ್ಕೆ ಬರುವುದು ಬೇಡ ಎಂದು ಮಠ […]