ಪುತ್ತಿಗೆ ಶ್ರೀ ನಡೆದಾಡುವ ಭಗವದ್ಗೀತೆ: ಪೇಜಾವರ ಶ್ರೀ 

ಬೆಂಗಳೂರು: ಪುತ್ತಿಗೆ ಶ್ರೀಪಾದರು ನಡೆದಾಡುವ ಭಗವದ್ಗೀತೆ. ಭಗವಂತನ ಸಂದೇಶವನ್ನು ವಿದೇಶದ ಭಕ್ತರಿಗೂ ಸಾರಿದವರು ಎಂದು ಪೇಜಾವರಮಠದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು ತಿಳಿಸಿದರು. ಗುರುವಾರ ನಗರದ. ಬಸವನಗುಡಿ ರಾಮಕೃಷ್ಣ ಆಶ್ರಮದ ಸಮೀಪದ ಗುರುನರಸಿಂಹ ಕಲ್ಯಾಣಮಂಟಪದಲ್ಲಿ ಶ್ರೀಪುತ್ತಿಗೆ ಸುಗುಣೇಂದ್ರತೀರ್ಥ ಸ್ವಾಮೀಜಿ ಅವರ ಬೆಂಗಳೂರು ಅಭಿಮಾನಿಗಳು ಮತ್ತು ಶಿಷ್ಯವೃಂದದವರು ಆಯೋಜಿಸಿದ್ದ `ಗುರು ವಂದನೋತ್ಸವ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶ್ರೀಗಳದ್ದು. ಮೇರು ವ್ಯಕ್ತಿತ್ವ. ಅವರ ಮುಂದೆ ನಾವೆಲ್ಲರೂ ಕುಬ್ಜರಾಗಿ ಕಾಣುತ್ತೇವೆ. ಸುಜ್ಞಾನೇಂದ್ರತೀರ್ಥ ಅನಂತರದಲ್ಲಿ ಮಠವನ್ನು ಸಮರ್ಥವಾಗಿ ನಿರ್ವಹಿಸಿದರು ಎಂದರು. ಆದರ್ಶ ಗುರು ಶಿಷ್ಯರು : […]