ಪುತ್ತೂರಿನಲ್ಲಿ ಭಗವತಿ ಯಕ್ಷ ಕಲಾ ಬಳಗದ ಯಕ್ಷ ನವಮಿ ಸಮಾರೋಪ

ಉಡುಪಿ: ನಮ್ಮ ದೇಶದ ಎಲ್ಲಾ ಕಲೆಗಳು ಪೌರಾಣಿಕ ಹಿನ್ನಲೆಯನ್ನು ಪಡೆದುಕೊಂಡಿವೆ, ನಮ್ಮ ಪುರಾಣದ ಕಥೆಗಳು ಇದಕ್ಕೆ ಉದಾಹರಣೆ. ನಮ್ಮ ಹಿರಿಯರು ಪೌರಾಣಿಕ ಪ್ರಸಂಗಗಳನ್ನು ಕಲಿತಿರುವುದೇ ಈ ಯಕ್ಷಗಾನದಿಂದಾಗಿ. ಹೀಗಾಗಿ ಅಂದು ನರಹರಿ ತೀರ್ಥರಿಂದ ಆರಂಭಗೊoಡಿದೆ ಎನ್ನಲಾದ ಈ ಯಕ್ಷಗಾನವನ್ನು ಉಳಿಸಿ ಬೆಳೆಸುವ ಆವಶ್ಯಕತೆಯಿದೆ ಎಂದು ಅದಮಾರು ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಹೇಳಿದರು. ಅವರು ಗುರುವಾರ ಉಡುಪಿ ಪುತ್ತೂರಿನ ಭಗವತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಶ್ರೀ ಭಗವತಿ ಯಕ್ಷ ಕಲಾ ಬಳಗದ ವತಿಯಿಂದ ನವರಾತ್ರಿ ಮಹೋತ್ಸವದ ಪ್ರಯುಕ್ತ […]