ಪುತ್ತೂರು: ಬಿಜೆಪಿ ನಾಯಕರ ಭಾವಚಿತ್ರ ಹಾಕಿದ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣ; ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠ ಅವರಿಗೆ ಜಾಮೀನು

ಪುತ್ತೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಬಳಿಕ ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ ನಳಿನ್ ಕುಮಾರ್ ಕಟೀಲ್ ಅವರ ಭಾವಚಿತ್ರವನ್ನೊಳಗೊಂಡ ಬ್ಯಾನರ್ ಅಳವಡಿಕೆ ಪ್ರಕರಣದಲ್ಲಿ ಬಂಧಿತ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿರುವ ಆರೋಪ ಎದುರಿಸುತ್ತಿದ್ದ ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ. ಹಿರೇಮಠ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದುಕೊಂಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆಯ ಆಗಿನ ಎಸ್‌ಐ ಶ್ರೀನಾಥ್ ರೆಡ್ಡಿ ಹಾಗೂ ಕಾನ್‌ಸ್ಟೆಬಲ್ […]
ಪುತ್ತೂರಿನಲ್ಲಿ ಅಸ್ತಿತ್ವಕ್ಕೆ ಬಂತು ‘ಪುತ್ತಿಲ ಪರಿವಾರ’: ಗುರು ಗೋವಳ್ಕರ್ ಆಶಯ ಪೂರೈಸಲು ಹೊಸ ಸಂಘಟನೆಯ ಉದಯ

ಪುತ್ತೂರು: ಬಿಜೆಪಿಯಿಂದ ಬಂಡಾಯ ಎದ್ದು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಬೆವರಿಳಿಸಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ನೇತೃತ್ವದಲ್ಲಿ ಹೊಸ ಸಂಘಟನೆಯೊಂದು ಅಸ್ತಿತ್ವಕ್ಕೆ ಬಂದಿದೆ. ‘ಪುತ್ತಿಲ ಪರಿವಾರ’ ಹೆಸರಿನ ಈ ಸಂಘಟನೆಯನ್ನು ಇಂದು ಲೋಕಾರ್ಪಣೆಗೊಳಿಸಿಲಾಗಿದೆ. ಪುತ್ತೂರಿನಲ್ಲಿ ನಡೆದ ಪುತ್ತಿಲ ಬೆಂಬಲಿಗರ “ನಮ್ಮ ನಡಿಗೆ ಮಹಾಲಿಂಗೇಶ್ವರನ ಕಡೆಗೆ” ಪಾದಯಾತ್ರೆ ಬಳಿಕ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಬೃಹತ್ ಕಾರ್ಯಕರ್ತರ ಸಭೆಯಲ್ಲಿ ಸಂಘಟನೆಯನ್ನು ಲೋಕಾರ್ಪಣೆಗೊಳಿಸಲಾಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದಂತೆ […]
ಪುತ್ತೂರು ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ಪ್ರಕರಣ: ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟದ ಎಚ್ಚರಿಕೆ ನೀಡಿದ ಶಾಸಕ ಹರೀಶ್ ಪೂಂಜಾ

ಪುತ್ತೂರು: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯದಿಂದ ಗಂಭೀರ ಗಾಯಗೊಂಡಿರುವ ಹಿಂದೂ ಸಂಘಟನೆ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಈ ಸಂದರ್ಭ ಪೊಲೀಸರ ಈ ಅಮಾನವೀಯ ಕೃತ್ಯವನ್ನು ಖಂಡಿಸಿದ ಅವರು, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಪೊಲೀಸರ ಮನಸ್ಥಿತಿ ಮತ್ತು ವರ್ತನೆಯ ದರ್ಶನವಾಗುತ್ತಿದೆ. ಹಿಂದೂ ಕಾರ್ಯಕರ್ತರ ಮೇಲೆ ಇಂತಹ ದೌರ್ಜನ್ಯ ನಡೆಯುವಾಗ ಓರ್ವ ಶಾಸಕನಾಗಿ ಅದರ ವಿರುದ್ಧ ಹೋರಾಟ ಮಾಡುತ್ತೇನೆ ಎಂದರು. ಈ ಬಗ್ಗೆ ದ.ಕ. ಜಿಲ್ಲಾ […]
ಮೈಸೂರು: ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯ ಸಹೋದರನ ಮನೆ ಮೇಲೆ ಐಟಿ ದಾಳಿ; 1 ಕೋಟಿ ವಶ

ಮೈಸೂರು: ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಚುನಾವಣಾ ಆಯೋಗವು ಎಷ್ಟೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದರೂ, ಅಕ್ರಮ ಹಣದ ಕಂತೆ ಕಂತೆಗಳು ಎಗ್ಗಿಲ್ಲದೆ ಅತ್ತಿಂದಿತ್ತ ಚಲಿಸುತ್ತಿವೆ. ಇದೀಗ ಮೈಸೂರಿನಲ್ಲಿರುವ ಸುಬ್ರಮಣ್ಯ ರೈ ಅವರ ಮನೆಯಲ್ಲಿ ಆದಾಯ ತೆರಿಗೆ ಇಲಾಖೆ ಒಂದು ಕೋಟಿ ರೂಪಾಯಿ ವಶಪಡಿಸಿಕೊಂಡಿದೆ. ಸುಬ್ರಮಣ್ಯ ರೈ ಪುತ್ತೂರಿನ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಸಹೋದರನಾಗಿದ್ದಾರೆ. ಕಳೆದ ಕೆಲವು ವಾರಗಳಿಂದ ಐಟಿ ಇಲಾಖೆಯು ಕರ್ನಾಟಕದಲ್ಲಿ ಚುನಾವಣಾ ಸರಮಾಲೆಯ ದಾಳಿಗಳನ್ನು ನಡೆಸಿದೆ. ಹುಬ್ಬಳ್ಳಿ, ಬೆಂಗಳೂರು, ಮೈಸೂರು ಹಾಗೂ ದಕ್ಷಿಣ […]
ಗೃಹ ಸಚಿವ ಅಮಿತ್ ಶಾ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದಲ್ಲಿ ಭಾಗಿ: ಸಂಚಾರ ಮಾರ್ಗದಲ್ಲಿ ಬದಲಾವಣೆ

ಪುತ್ತೂರು: ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಸಮಾರಂಭಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಫೆ.11ರಂದು ಪುತ್ತೂರಿಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಕಾರ್ಯಕ್ರಮಗಳ ವಿವರಗಳನ್ನು ನೀಡಲಾಗಿದ್ದು, ಮೊದಲು ಮುಖ್ಯಮಂತ್ರಿ ಬೊಮ್ಮಾಯಿ ವಿವೇಕಾನಂದ ಇಂಜಿನಿಯರ್ ಕಾಲೇಜಿಗೆ ಆಗಮಿಸಿ ಕೃಷಿ ಮೇಳದಲ್ಲಿ ಪಾಲ್ಗೊಂಡು ನಂತರ 3.25 ಗಂಟೆಗೆ ತೆಂಕಿಲ ಸಮಾವೇಶಕ್ಕೆ ತೆರಳಿದ್ದಾರೆ. ಕಣ್ಣೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗೃಹ ಸಚಿವ ಅಮಿತ್ ಷಾ 2.20 ಕ್ಕೆ ಬಿಎಸ್ಎಫ್ ಹೆಲಿಕಾಪ್ಟರ್ ಮೂಲಕ ಈಶ್ವರಮಂಗಲ ಗಜಾನನ ಶಾಲೆ ಹೆಲಿಪ್ಯಾಡ್ ಗೆ 2.45 ತಲುಪಿ, ಹನುಮಗಿರಿ […]