ಕೌರಂಟೈನ್ ಕೇಂದ್ರ ಆರಂಭಕ್ಕೆ ವಿರೋಧಿಸಿದಲ್ಲಿ ಜೈಲು: ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ ಮೇ 8: ಜಿಲ್ಲೆಗೆ ವಿದೇಶದಿಂದ ಮತ್ತು ಹೊರರಾಜ್ಯದಿಂದ ಆಗಮಿಸುವವರನ್ನು ಕ್ವಾರಂಟೈನ್ ಗೊಳಿಸಬೇಕಾಗಿದ್ದು, ಈ ಕುರಿತು ಕ್ವಾರಂಟೈನ್ ಕೇಂದ್ರಗಳ ಆರಂಭಕ್ಕೆ ವಿರೋಧ ವ್ಯಕ್ತಪಡಿಸಿ , ಅಡ್ಡಿಪಡಿಸುವವರನ್ನು ಸೆಕ್ಷನ್ 188, 269, 270 ಪ್ರಕಾರ ಜೈಲುಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ. ಕ್ವಾರಂಟೈನ್ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದ್ದು, ನೀರಿನ ಸಮಸ್ಯೆಯಿದ್ದಲ್ಲಿ ಸಂಬಂದಪಟ್ಟ ಪಂಚಾಯತ್ ಮೂಲಕ ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುವುದು, ಸಂಸ್ಥೆಯ ಸಿಬ್ಬಂದಿಗಳು ಅಗತ್ಯ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಡಲಾಗುವುದು, ಕೇಂದ್ರದ […]