ಕಾರ್ಕಳದಲ್ಲಿ 10 ಕೋಟಿ ವೆಚ್ಚದಲ್ಲಿ ವಿಪತ್ತು ನಿರ್ವಹಣಾ ಕೇಂದ್ರ ನಿರ್ಮಾಣ: ಸಚಿವ ಆರ್ ಅಶೋಕ್

ಉಡುಪಿ: ಕಾರ್ಕಳದಲ್ಲಿ ವಿಪತ್ತು ನಿರ್ವಹಣಾ ಕೇಂದ್ರ ನಿರ್ಮಾಣ ಮಾಡುವಂತೆ ಕಾರ್ಕಳ ಶಾಸಕರು ವಿನಂತಿ ಮಾಡಿದ್ದಾರೆ. ಅದಕ್ಕೆ ಕೂಡಲೇ 10 ಕೋಟಿ ರೂ. ಬಿಡುಗಡೆ ಮಾಡುತ್ತೇನೆ. ಪ್ರವಾಹ ಬಂದಂತಹ ಸಂದರ್ಭದಲ್ಲಿ ನೆರೆ ಸಂತ್ರಸ್ತರಿಗೆ ಉಳಿದುಕೊಳ್ಳಲು ಅನುಕೂಲವಾಗಲು ಈ ಕೇಂದ್ರವನ್ನು ನಿರ್ಮಾಣ ಮಾಡಲಾಗುತ್ತದೆ. ಇದರಲ್ಲಿ ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಹಾಗೆ ಊಟ, ಉಪಹಾರಕ್ಕೆ ಅಡುಗೆ ಕೋಣೆ, ವೈದ್ಯಕೀಯ ಕೊಠಡಿಯನ್ನು ಒಳಗೊಂಡಿರುತ್ತದೆ. ಇದನ್ನು ಮಳೆಗಾಲದಲ್ಲಿ ನೆರೆ ಸಂತ್ರಸ್ತರಿಗಾಗಿ ಬಳಸಲಾಗುತ್ತದೆ. ಉಳಿದ ದಿನಗಳಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಬಳಸಲಾಗುತ್ತದೆ ಎಂದು […]