ಜು. 13 ರಂದು ಕಂದಾಯ ಸಚಿವ ಆರ್ ಅಶೋಕ್ ಜಿಲ್ಲಾ ಪ್ರವಾಸ

ಉಡುಪಿ: ರಾಜ್ಯದ ಕಂದಾಯ ಸಚಿವ ಆರ್. ಅಶೋಕ್ ಅವರು ಜುಲೈ 13 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜು. 12 ರಂದು ರಾತ್ರಿ 8.30 ಕ್ಕೆ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಜು. 13 ರಂದು ಬೆಳಗ್ಗೆ 9 ಗಂಟೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಳೆ ಹಾನಿಗೆ ಸಂಬಂಧಿಸಿದಂತೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಭಾಗವಹಿಸಿ, ಉತ್ತರ ಕ್ನನಡ ಜಿಲ್ಲೆಗೆ ಪ್ರಯಾಣಿಸಿ, ನಂತರ ಉಡುಪಿ ಜಿಲ್ಲೆಯಲ್ಲಿ ಸಂಜೆ 6 ಗಂಟೆಗೆ […]

ಮನೆ ಬಾಗಿಲಿಗೆ ಪಿಂಚಣಿ ಸೌಲಭ್ಯ ಬೇಕೆ? ಹಾಗಾದರೆ ಹಲೋ ಕಂದಾಯ ಸಚಿವರೇ ಸಹಾಯವಾಣಿ 155245 ಗೆ ಕರೆ ಮಾಡಿ

ಉಡುಪಿ: ಕುಟುಂಬದ ವಾರ್ಷಿಕ ಆದಾಯ 32,000 ರೂ. ಕ್ಕಿಂತ ಕಡಿಮೆ ಇರುವ ವೃದ್ಧರು, ವಿಶೇಷ ಚೇತನರು, ವಿಧವೆಯರು ಹಾಗೂ ಅವಿವಾಹಿತ ಅಥವಾ ವಿಚ್ಚೇಧಿತ ಮಹಿಳೆಯರು ಮಾಸಿಕ ಪಿಂಚಣಿ ಸೌಲಭ್ಯಕ್ಕಾಗಿ ಕೋರಿಕೆ ಸಲ್ಲಿಸಬಹುದಾಗಿದ್ದು, ಕಂದಾಯ ಇಲಾಖೆಯ ವಿನೂತನ ಯೋಜನೆಯಾದ ಹಲೋ ಕಂದಾಯ ಸಚಿವರೇ ಸಹಾಯವಾಣಿ ಸಂಖ್ಯೆ 155245 ಗೆ ಉಚಿತವಾಗಿ ಕರೆ ಮಾಡುವ ಮೂಲಕ ಮನೆ ಬಾಗಿಲಿನಲ್ಲೇ ಪಿಂಚಣಿ ಸೌಲಭ್ಯವನ್ನು ಪಡೆಯಬಹುದು. ಪಿಂಚಣಿ ಪಡೆಯಲು ಆಧಾರ್ ಕಾರ್ಡ್ ನೋಂದಾವಣೆ ಕಡ್ಡಾಯವಾಗಿದೆ. ಈ ಯೋಜನೆಯಡಿ ಪಿಂಚಣಿ ಕೋರಿಕೆ ಸ್ವೀಕರಿಸಿದ 72 […]

ದ.ಕ ಜಿಲ್ಲೆಯಲ್ಲಿ ಕಡತ ವಿಲೇವಾರಿ ಅಭಿಯಾನ: ಫೆ. 28 ರೊಳಗೆ ಬಾಕಿ ಇರುವ 82000 ಕಡತಗಳಿಗೆ ಮುಕ್ತಿ: ಸುನಿಲ್ ಕುಮಾರ್

  ದಕ್ಷಿಣ ಕನ್ನಡದ 45 ಸರಕಾರಿ ಕಚೇರಿಗಳಲ್ಲಿ ಬಾಕಿ ಉಳಿದಿರುವ 82,400 ಕಡತಗಳನ್ನು ಫೆ.19 ರಿಂದ ಫೆ.28ರೊಳಗೆ ವಿಶೇಷ ಕಡತ ತೆರವು ಅಭಿಯಾನದಡಿ ವಿಲೇವಾರಿ ಮಾಡಲಾಗುವುದು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ತಿಳಿಸಿದರು. ಅವರು ಫೆಬ್ರವರಿ 19 ಶುಕ್ರವಾರದಂದು ಮಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರೊಂದಿಗೆ ಕಡತ ವಿಲೇವಾರಿ ಅಭಿಯಾನಕ್ಕೆ ಚಾಲನೆ ನೀಡುತ್ತಾ ಮಾತನಾಡಿ, ಬಾಕಿ ಉಳಿದಿರುವ ಕಡತಗಳನ್ನು ಬಾಕಿ ಉಳಿದಿರುವ ಹಳೆಯ ಕಡತಗಳು, ಕುಂದುಕೊರತೆಗಳ ಬಾಕಿ ಇರುವ ಅರ್ಜಿಗಳು […]