ರೇಬಿಸ್ ರೋಗವನ್ನು ಅಧಿಸೂಚಿತ ಎಂದು ಘೋಷಿಸಲಿದೆ ದೆಹಲಿ ಸರ್ಕಾರ!

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ರೇಬಿಸ್ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅದನ್ನು ಸಾಂಕ್ರಾಮಿಕ ರೋಗಗಳ ಕಾಯ್ದೆ ಅಡಿಯಲ್ಲಿ ‘ಅಧಿಸೂಚಿತ ರೋಗ’ ಎಂದು ಘೋಷಿಸಲು ದೆಹಲಿ ಸರ್ಕಾರ ಸಿದ್ಧತೆ ನಡೆಸಿದೆ.ಈ ಕಾಯಿಲೆಯಿಂದ ಬಳಲುತ್ತಿರುವವರ ಮೇಲ್ವಿಚಾರಣೆಯನ್ನು ಬಲಪಡಿಸಲು ಹಾಗೂ ಸಕಾಲದಲ್ಲಿ ಚಿಕಿತ್ಸೆ ಒದಗಿಸುವುದನ್ನು ಖಾತ್ರಿಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ. ‘ದೆಹಲಿಯಲ್ಲಿ ರೇಬಿಸ್‌ನಿಂದ ಒಂದೇ ಒಂದು ಸಾವು ಕೂಡ ಸಂಭವಿಸದಂತೆ ಗುರಿ ಸಾಧಿಸುವ ನಿಟ್ಟಿನಲ್ಲಿ ಇಟ್ಟಿರುವ ಮಹತ್ವದ ಹೆಜ್ಜೆ ಇದಾಗಿದೆ’ ಎಂದು ದೆಹಲಿ ಆರೋಗ್ಯ ಸಚಿವ ಪಂಕಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ. […]