ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ರಾಘವೇಂದ್ರ ಕಿಣಿ ಅಧಿಕಾರ ಸ್ವೀಕಾರ

ಉಡುಪಿ, ಜೂ29:  ಉಡುಪಿ ನಗರದಲ್ಲಿ, ನಗರಾಭಿವೃದ್ದಿ ಪ್ರಾಧಿಕಾರದ ವತಿಯಿಂದ ರಾಜ್ಯಕ್ಕೆ ಮಾದರಿಯಾದ ವ್ಯವಸ್ಥಿತ ಲೇಔಟ್ ನಿರ್ಮಾಣ ಮಾಡಲಾಗುವುದು ಎಂದು ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ನೂತನ ಅಧ್ಯಕ್ಷ ರಾಘವೇಂದ್ರ ಕಿಣಿ ಹೇಳಿದ್ದಾರೆ. ಅವರು ಸೋಮವಾರ, ಉಡುಪಿ ನಗರಾಭಿವೃಧ್ದಿ ಪ್ರಾಧಿಕಾರದ ಕಚೇರಿಯಲ್ಲಿ, ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದರು. ನಗರಾಭಿವೃಧ್ದಿ ಪ್ರಾಧಿಕಾರದ ಮೂಲಕ ಜಾಗ ಖರೀದಿಸಿ ಅಲ್ಲಿ, ಅತ್ಯಂತ ವ್ಯವಸ್ಥಿತ ರೀತಿಯಲ್ಲಿ ಲೇ ಔಟ್ ನಿರ್ಮಾಣದ ಗುರಿ ಹೊಂದಿದ್ದು, ಪ್ರಾಧಿಕಾರದ ಕಚೇರಿಯನ್ನು ಜನಸ್ನೇಹಿಯಾಗಿ ರೂಪಿಸಿ,  ಸಾರ್ವಜನಿಕರಿಗೆ ಶೀಘ್ರದಲ್ಲಿ ಸೇವೆ ನೀಡಲಾಗುವುದು, ಪ್ರತಿದಿನ […]