ನಿವೇಶನ ರಹಿತರೆಲ್ಲರಿಗೂ ಮನೆ ನಿರ್ಮಿಸಿ ಕೊಡುವ ಗುರಿ: ಕೆ. ರಘುಪತಿ ಭಟ್

ಉಡುಪಿ : ಜಿಲ್ಲೆಯಲ್ಲಿ 80% ಜನರು ಸ್ವಂತ ಮನೆಯಿಲ್ಲದೆ ಬಾಡಿಗೆ ಮನೆಯಲ್ಲಿ ಜೀವನ ಸಾಗಿಸುತ್ತಿದ್ದಾರೆ. ಬಡತನದಲ್ಲಿರುವ ಈ ಕುಟುಂಬಗಳಿಗೆ ತಮ್ಮದೇ ಆದ ಸ್ವಂತ ಮನೆ ನಿರ್ಮಾಣ ಮಾಡುವ ಕನಸಿದ್ದು, ಆ ಕನಸನ್ನು ನನಸು ಮಾಡಲು ಕರ್ನಾಟಕ ಕೊಳಗೇರಿ ಮಂಡಳಿ ಮತ್ತು ನಗರಸಭೆ ಸಜ್ಜಾಗಿದೆ ಎಂದು ಶಾಸಕ ಕೆ.ರಘುಪತಿ ಭಟ್ ಹೇಳಿದರು. ಅವರು, ಶನಿವಾರ ಅಜ್ಜರಕಾಡು ಪುರಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಮತ್ತು ಉಡುಪಿ ನಗರಸಭೆ ವತಿಯಿಂದ ನಿವೇಶನ ರಹಿತರಿಗೆ ವಸತಿ ನಿರ್ಮಾಣ […]