ಹೆಜಮಾಡಿ ಟೋಲ್ ನಲ್ಲಿ ದುಬಾರಿ ಶುಲ್ಕ ಅವೈಜ್ಞಾನಿಕ: ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿ ಶಾಸಕ ರಘುಪತಿ ಭಟ್ ಮನವಿ

ಉಡುಪಿ: ಸುರತ್ಕಲ್ ಟೋಲ್ ರದ್ದು ಮಾಡಿ ಅದರ ಶುಲ್ಕವನ್ನು ಹೆಜಮಾಡಿ ಟೋಲ್ ಜತೆ ವಿಲೀನ ಮಾಡಿರುವುದು ಅವೈಜ್ಞಾನಿಕವಾಗಿದ್ದು, ಇದರಿಂದಾಗಿ ಉಂಟಾಗುವ ಪರಿಣಾಮಗಳ ಬಗ್ಗೆ ಡಿ. 01ರಂದು ಶಾಸಕ ರಘುಪತಿ ಭಟ್ ಅವರು ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ವಿನಂತಿಸಿದರು. ಮನವಿ ಸ್ವೀಕರಿಸಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ […]

ವಿದ್ಯಾರ್ಥಿ ದೆಸೆಯಲ್ಲಿ ಕ್ರೀಡಾಸ್ಫೂರ್ತಿಯನ್ನು ತುಂಬುವುದು ಅಗತ್ಯ: ಶಾಸಕ ಕೆ.ರಘಪತಿ ಭಟ್

ಉಡುಪಿ: ವಿದ್ಯಾರ್ಥಿ ದೆಸೆಯಲ್ಲಿ ಕ್ರೀಡಾಸ್ಫೂರ್ತಿಯನ್ನು ತುಂಬುವುದು ಅಗತ್ಯ. ಹೊಸತನದ ಚಿಂತನೆಯೊಂದಿಗೆ, ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಪದವಿಪೂರ್ವ ವಿಭಾಗದಲ್ಲಿ ನಡೆಯುತ್ತಿರುವ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ದಾಖಲಾಗುವ ಕೂಟ ದಾಖಲೆಯನ್ನು ಸಮತೂಕವಾಗಿ ದಾಖಲಿಸುವ ನಿಟ್ಟಿನಲ್ಲಿ ಫೋಟೋ ಫಿನಿಶಿಂಗ್ ಬಳಸುತ್ತಿರುವುದು ಅಭಿನಂದನಾರ್ಹ ಎಂದು ಶಾಸಕ ಕೆ.ರಘಪತಿ ಭಟ್ ಅಭಿಪ್ರಾಯಪಟ್ಟರು. ಅವರು ಕರ್ನಾಟಕ ಸರ್ಕಾರ ಪದವಿಪೂರ್ವ ಶಿಕ್ಷಣ ಇಲಾಖೆ, ರಜತ್ರಾದಿ,ಮಣಿಪಾಲ, ಉಡುಪಿ, ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜು, ನಾಗಬನ ಕ್ಯಾಂಪಸ್ ಇವರ ಸಂಯುಕ್ತ ಆಶ್ರಯದಲ್ಲಿ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು, ಉಡುಪಿ ಇಲ್ಲಿ ಆಯೋಜಿಸಿದ್ದ […]

ಹಣ್ಣು-ತರಕಾರಿ ಮತ್ತು ದಿನಸಿ ವರ್ತಕರ ಸಂಘ  ಉದ್ಘಾಟನೆ

ಉಡುಪಿ: ಹಣ್ಣು, ತರಕಾರಿ ಮತ್ತು ದಿನಸಿ ವರ್ತಕರ ಸಂಘ ಆದಿ ಉಡುಪಿ ಕೃಷಿ ಉತ್ಪನ್ನ ಮಾರುಕಟ್ಟೆ ಇದರ ಉದ್ಘಾಟನಾ ಸಮಾರಂಭ ಬುಧವಾರ ಆದಿ ಉಡುಪಿ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ನಡೆಯಿತು. ಶಾಸಕ ಕೆ. ರಘುಪತಿ ಭಟ್ ಭಾಗವಹಿಸಿ ಉದ್ಘಾಟನೆ ನೆರವೇರಿಸಿ ಶುಭಹಾರೈಸಿದರು. ಹಣ್ಣು, ತರಕಾರಿ ಮತ್ತು ದಿನಸಿ ವರ್ತಕರ ಸಂಘ ಸಂಘದ ಅಧ್ಯಕ್ಷ ಸತೀಶ್ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, […]

ಕಲ್ಸಂಕ ಜಂಕ್ಷನ್ ಬಳಿ ನಿರ್ಮಿಸಿರುವ ಫ್ರೀ ಲೆಫ್ಟ್ ಸಾರ್ವಜನಿಕ ಸಂಚಾರಕ್ಕೆ ಮುಕ್ತ

ಉಡುಪಿ: ಕಲ್ಸಂಕ ಬಳಿ ದಿನೇ ದಿನೇ ವಾಹನ ದಟ್ಟಣೆ ಹೆಚ್ಚುತ್ತಿದ್ದು, ನಗರವಾಸಿಗಳು ಕಿರಿಕಿರಿ ಅನುಭವಿಸುತ್ತಿದ್ದರು. ಈ ಸಮಸ್ಯೆಗೆ ಪರಿಹಾರವಾಗಿ ಮಾಂಡವಿ ಬಿಲ್ಡರ್ಸ್ ಸಹಕಾರದೊಂದಿಗೆ ಕಲ್ಸಂಕ ಜಂಕ್ಷನ್ ಬಳಿ ಫ್ರೀ ಲೆಫ್ಟ್ ನಿರ್ಮಿಸಲಾಗಿದ್ದು, ಬುಧವಾರದಂದು ಇದರ ಉದ್ಘಾಟನಾ ಕಾರ್ಯವು ನೆರವೇರಿತು.  ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿ ಇದರ ನಿರ್ಮಾಣಕ್ಕೆ ಸಹಕರಿಸಿದ ಮಾಂಡವಿ ಬಿಲ್ಡರ್ಸ್ ಗೆ ಅಭಿನಂದನೆ ಸಲ್ಲಿಸಿದರು. ಫ್ರೀ ಲೆಫ್ಟ್ ನಿರ್ಮಾಣದಿಂದ ವಾಹನ ದಟ್ಟಣೆ ಕಡಿಮೆಯಾಗಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ. ಈ ಸಂದರ್ಭದಲ್ಲಿ ಮಾಂಡವಿ ಬಿಲ್ಡರ್ಸ್ […]

ಬ್ರಹ್ಮಾವರ: ದರ್ಖಾಸ್ತು ಜಾಗ ಅತಿಕ್ರಮಣ; ಶಾಸಕ ರಘುಪತಿ ಭಟ್ ರಿಂದ ಸ್ಥಳ ಪರಿಶೀಲನೆ

ಬ್ರಹ್ಮಾವರ: ತಾಲೂಕಿನ ಆರೂರು ಗ್ರಾಮದ ಸ.ನಂ 148/2ಬಿ ರಲ್ಲಿ 1 ಎಕರೆ ಜಮೀನು ಉಡುಪಿ ತಹಶೀಲ್ದಾರರ ಎಡಿಎಸ್/ಡಿ.ಸಿ.ಆರ್.ಸಿ.ಆರ್ ನಂಬ್ರ 168/1982-83 ರಂತೆ ಶ್ರೀಕೃಷ್ಣ ನಾಯಕ ಎಂಬವರ ಹೆಸರಿಗೆ ದರ್ಖಾಸ್ತು ಮಂಜೂರಾತಿಯಾಗಿ ಅವರ ಹೆಸರಿನಲ್ಲಿ ಪಹಣಿ ದಾಖಲಾಗಿದ್ದರೂ ಈ ಜಾಗವನ್ನು ಬೇರೊಬ್ಬರು ಅತಿಕ್ರಮಿಸಿದ್ದು ಇದನ್ನು ಸರಿಪಡಿಸುವಂತೆ ಮಾಡಿರುವ ಮನವಿಯಂತೆ ಸೋಮವಾರದಂದು ಶಾಸಕ ಕೆ. ರಘುಪತಿ ಭಟ್ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ನೀಡುವ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಆರೂರು […]