ವಿಶ್ವ ಪ್ರವಾಸೋದ್ಯಮ ದಿನಾಚರಣೆ: ಬೈಕ್ ರ‍್ಯಾಲಿಗೆ ಶಾಸಕ ರಘುಪತಿ ಭಟ್ ರಿಂದ ಚಾಲನೆ

ಉಡುಪಿ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕರಾವಳಿ ಪ್ರವಾಸೋದ್ಯಮ ಸಂಘಟನೆ ಇವರ ಸಹಯೋಗದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ 2022 ಅಂಗವಾಗಿ ‘ಪ್ರವಾಸೋದ್ಯಮದ ಪುನರಾವಲೋಕನ’ ಎಂಬ ಸಂದೇಶದೊಂದಿಗೆ ಬೈಕ್ ರ‍್ಯಾಲಿಯನ್ನು ಆಯೋಜಿಸಲಾಯಿತು. ಮಂಗಳವಾರದಂದು ಮಣಿಪಾಲ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಬಳಿ ಆಯೋಜಿಸಲಾದ ಬೈಕ್ ರ‍್ಯಾಲಿಗೆ ಶಾಸಕ ರಘುಪತಿ ಭಟ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಕ್ಲಿಫರ್ಡ್ ಲೋಬೋ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ […]

ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ಸಭೆ: ಶಾಸಕ ರಘುಪತಿ ಭಟ್ ಭಾಗಿ

ಉಡುಪಿ: ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ಸಭೆ ಸೆ 24 ರಂದು ನಡೆಯಿತು. ಸಭೆಯಲ್ಲಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರು ಪಾಲ್ಗೊಂಡು ವಿವಿಧ ಯೋಜನೆಗಳನ್ನು ಕಾರ್ಯಗತಗೊಳಿಸುವ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಕಲ್ಮಾಡಿ, ಸದಸ್ಯರುಗಳಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಕಿಶೋರ್ ಕುಮಾರ್, ಸುಮಾ ನಾಯ್ಕ್, ಮಾಲತಿ ಸುಧಾಕರ್, ಯೋಗೀಶ್ ಚಂದ್ರಾಧರ್, ಉಡುಪಿ ನಗರ ಸಭೆಯ ಪೌರಾಯುಕ್ತ ಉದಯ್ ಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತಗುರುಪ್ರಸಾದ್, ನಗರ ಯೋಜನಾ ಸದಸ್ಯ ನವೀನ್ ಕುಮಾರ್, […]

ನಗರಸಭೆಯ ಘನತ್ಯಾಜ್ಯ ನಿರ್ವಹಣಾ ವಾಹನಗಳಿಗೆ ಚಾಲನೆ ನೀಡಿದ ಶಾಸಕ ರಘುಪತಿ ಭಟ್

ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ನಗರಸಭೆಯ ಘನತ್ಯಾಜ್ಯ ನಿರ್ವಹಣೆಗೆ ಫ್ರಂಟ್ ಆಂಡ್ ಬ್ಯಾಕ್ ಲೋಡರ್ ವಾಹನ ಹಾಗೂ ನಾಲ್ಕು ಟಿಪ್ಪರ್ ಮಂಜೂರಾಗಿದ್ದು, ಶಾಸಕ ಕೆ ರಘುಪತಿ ಭಟ್ ನಗರಸಭೆಯ ಮುಂಭಾಗದಲ್ಲಿ ವಾಹನಗಳಿಗೆ ಚಾಲನೆ ನೀಡಿದರು. ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷ ಲಕ್ಷ್ಮೀ ಮಂಜುನಾಥ ಕೊಳ, ನಗರಸನ್ಹೆಯ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಪೌರಾಯುಕ್ತ ಉದಯ್ ಶೆಟ್ಟಿ, ನಗರಸಭಾ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.  

ದಿ. ಪಳ್ಳಿ ಗೋಕುಲ್ ದಾಸ್ ಸಂಸ್ಮರಣೆ ಪ್ರಯುಕ್ತ ಪ್ರತಿಭಾನ್ವಿತರ ಅಭಿನಂದನಾ ಕಾರ್ಯಕ್ರಮ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಐ.ಟಿ.ಡಿ.ಪಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕೊರಗ ಸಂಘಟನೆ ಉಡುಪಿ ಇವರ ಸಹಯೋಗದೊಂದಿಗೆ ‘ದಿ. ಪಳ್ಳಿ ಗೋಕುಲ್ ದಾಸ್ ಸಂಸ್ಮರಣೆ, 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ, ಮಕ್ಕಳ ಮಾನಸಿಕ ಆರೋಗ್ಯದ ಕುರಿತು ಆತ್ಮ ಸಮಾಲೋಚನೆ ಹಾಗೂ ಎಸ್.ಎಸ್.ಎಲ್.ಸಿ ನಂತರ ಮುಂದೇನು ಎಂಬ ವಿಷಯದ ಕುರಿತ ಮಾಹಿತಿ ಕಾರ್ಯಾಗಾರವು ಶನಿವಾರ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಸಕ ಕೆ. ರಘುಪತಿ ಭಟ್ […]

ಇತಿಹಾಸ ಗೊತ್ತಿದ್ದಾಗ ಮಾತ್ರ ಇತಿಹಾಸ ಸೃಷ್ಟಿಸಲು ಸಾಧ್ಯ : ಪ್ರತಾಪ್ ಸಿಂಹ

ಉಡುಪಿ: ಇತಿಹಾಸ ಗೊತ್ತಿದ್ದಲ್ಲಿ ಮಾತ್ರ ಇತಿಹಾಸವನ್ನು ಸೃಷ್ಠಿಸಲು ಸಾಧ್ಯ. ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ಪ್ರತಿಯೊಬ್ಬರು ತಿಳಿಯುವುದರೊಂದಿಗೆ ದೇಶ ಪ್ರೇಮವನ್ನು ಹಾಗೂ ದೇಶಾಭಿಮಾನವನ್ನು ಬೆಳೆಸಿಕೊಂಡು ನಾವು ಪಡೆದಿರುವ ಸಾತಂತ್ರ್ಯವನ್ನು ಉಳಿಸಿಕೊಂಡು ಹೋಗಬೇಕಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಹೇಳಿದರು. ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. […]