ಶಾಸಕ ಕೆ. ರಘುಪತಿ ಭಟ್ ಅವರ ಜನ್ಮ ದಿನಾಚರಣೆ: ಇಂದು ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಉಡುಪಿ: ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಬಿಜೆಪಿ ಉಡುಪಿ ನಗರ ಇದರ ಆಶ್ರಯದಲ್ಲಿ ನಗರ ಬಿಜೆಪಿ ಎಲ್ಲಾ ಮೋರ್ಚಾಗಳ ಸಹಭಾಗಿತ್ವದಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆಯ ಮಣಿಪಾಲ ರಕ್ತ ನಿಧಿ ವಿಭಾಗದಲ್ಲಿ ಇಂದು (ಫೆ. 24) ಬೆಳಿಗ್ಗೆ 9ರಿಂದ 1 ಗಂಟೆ ವರೆಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.