ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್‌ ಆಗಿ ರಾಹುಲ್‌ ದ್ರಾವಿಡ್‌ ನೇಮಕ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್‌ ಆಗಿ ಮಾಜಿ ಆಟಗಾರ ರಾಹುಲ್‌ ದ್ರಾವಿಡ್‌ ಅವರನ್ನು ನೇಮಕ ಮಾಡಲಾಗಿದೆ. ಟಿ20 ವಿಶ್ವಕಪ್‌ ಬೆನ್ನಲ್ಲೇ ಕೋಚ್‌ ರವಿಶಾಸ್ತ್ರಿ ಅವರ ಗುತ್ತಿಗೆ ಅವಧಿ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ರಾಹುಲ್‌ ಅವರನ್ನು ಎರಡು ವರ್ಷಗಳ ಅವಧಿಗೆ ಮುಖ್ಯ ಕೋಚ್‌ ಆಗಿ ನೇಮಕ ಮಾಡಲಾಗಿದೆ ಎಂದು ಬಿಸಿಸಿಐ ಅಧಿಕೃತ ಆದೇಶ ನೀಡಿದೆ‌. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿರುವ ರಾಹುಲ್‌ ದ್ರಾವಿಡ್‌ ಅವರು ಭಾರತ ತಂಡದ ಮುಖ್ಯ ಕೋಚ್‌ ಆಗಿ ನೇಮಕಗೊಳ್ಳುವ ಮುನ್ನ ಎನ್‌ಸಿಎ […]