ರಾಯ್ ಬರೇಲಿ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ರಾಹುಲ್ ಗಾಂಧಿ: ಕಾಂಗ್ರೆಸ್ ನಿಂದ ಮಹತ್ವದ ಘೋಷಣೆ
ನವದೆಹಲಿ: ಕಾಂಗ್ರೆಸ್ ಪಕ್ಷದ ಬಹು ದೊಡ್ಡ ನಿರ್ಧಾರದಲ್ಲಿ ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಕ್ಷೇತ್ರದಿಂದ ಕಣಕ್ಕಿಳಿಸುವುದಾಗಿ ಪಕ್ಷವು ಘೋಷಿಸಿದೆ. ಕಳೆದು ಕೆಲವು ದಿನಗಳಿಂದ ರಾಹುಲ್ ಗಾಂಧಿ ಅಮೇಥಿಯಿಂದ ಮರಳಿ ಸ್ಪರ್ಧಿಸಲಿದ್ದಾರೆ ಎನ್ನುವ ಊಹಾಪೋಹಗಳು ಹರಿದಾಡುತ್ತಿದ್ದವು. ರಾಹುಲ್ ಗಾಂಧಿಯು ಕೇರಳದ ವಯನಾಡ್ ಮತ್ತು ಅಮೇಥಿ ಎರಡು ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ ಎನ್ನುವಂತಹ ಮಾತುಗಳನ್ನು ತೇಲಿ ಬಿಡಲಾಗಿತ್ತು. ಆದರೆ ಇದೀಗ ರಾಹುಲ್ ಗಾಂಧಿ ತಮ್ಮ ತಾಯಿಯಿಂದ ತೆರವಾದ ರಾಯ್ ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ. ಸೋನಿಯಾಗಾಂಧಿ ರಾಜ್ಯಸಭೆ ಪ್ರವೇಶಿಸಿದ್ದು ಈ […]
ಆಸ್ತಿ ವಿವರ ಬಹಿರಂಗ ಪಡಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ನವದೆಹಲಿ: ವಯನಾಡ್ ಸಂಸದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಬುಧವಾರದಂದು ಕೇರಳದ ವಯನಾಡ್ ಕ್ಷೇತ್ರದಿಂದ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ್ದು, ತಮ್ಮ ಆಸ್ತಿ ವಿವರಗಳನ್ನು ಬಹಿರಂಗ ಪಡಿಸಿದ್ದಾರೆ. ರಾಹುಲ್ ಗಾಂಧಿ ಸಲ್ಲಿಸಿರುವ ಅಫಿಡವಿಟ್ ಪ್ರಕಾರ, ರಾಹುಲ್ ಬಳಿ 4.3 ಕೋಟಿ ರೂ ಮೌಲ್ಯದ ಷೇರು ಮಾರುಕಟ್ಟೆ ಹೂಡಿಕೆ, 3.81 ಕೋಟಿ ರೂ ನ ಮ್ಯೂಚುವಲ್ ಫಂಡ್ ಠೇವಣಿ ಮತ್ತು ಬ್ಯಾಂಕ್ ಖಾತೆಯಲ್ಲಿ 26.25 ಲಕ್ಷ ರೂ. ಹೊಂದಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. 2022-23ರ […]
ವಯನಾಡ್: ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ
ವಯನಾಡ್: ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಮುಂಬರುವ ಲೋಕಸಭೆ ಚುನಾವಣೆಗೆ ಇಂದು ವಯನಾಡಿನಲ್ಲಿ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಅವರು ವಯನಾಡಿನಲ್ಲಿ ರೋಡ್ ಶೋ ನಡೆಸಿದರು. ರಾಹುಲ್ ಸಹೋದರಿ ಪ್ರಿಯಾಂಕಾ ವಾಡ್ರಾ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್ ಮತ್ತು ದೀಪಾ ದಾಸ್ ಸೇರಿದಂತೆ ಇತರ ಕಾಂಗ್ರೆಸ್ ನಾಯಕರು ರೋಡ್ ಶೋನಲ್ಲಿ ಭಾಗವಹಿಸಿದರು. ಸಿಪಿಐ ಈ ಕ್ಷೇತ್ರದಿಂದ ಅನ್ನಿ ರಾಜಾ ಅವರನ್ನು ಕಣಕ್ಕಿಳಿಸಿದೆ ಮತ್ತು ಬಿಜೆಪಿ ತನ್ನ […]
ಭಾಷಣ ಮಾಡುವಾಗ ಜಾಗರೂಕರಾಗಿರಿ: ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ಸಲಹೆ
ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ ಚುನಾವಣಾ ಆಯೋಗವು (EC) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭವಿಷ್ಯದಲ್ಲಿ ಸಾರ್ವಜನಿಕವಾಗಿ ಪ್ರತಿಕ್ರಿಯೆಗಳನ್ನು ನೀಡುವಾಗ “ಹೆಚ್ಚು ಎಚ್ಚರಿಕೆಯಿಂದ ಮತ್ತು ಜಾಗರೂಕರಾಗಿರುವಂತೆ” ಮತ್ತು ಚುನಾವಣಾ ಪ್ರಚಾರದ ಸಮಯದಲ್ಲಿ ಸ್ಟಾರ್ ಪ್ರಚಾರಕರು ಮತ್ತು ಅಭ್ಯರ್ಥಿಗಳಿಗೆ ಆಯೋಗವು ಇತ್ತೀಚೆಗೆ ನೀಡಿದ ಸಲಹೆಯನ್ನು ಅನುಸರಿಸುವಂತೆ ತಿಳಿಸಿದೆ. 2023ರ ನವೆಂಬರ್‌ನಲ್ಲಿ ರಾಜಸ್ಥಾನದಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುವಾಗ ರಾಹುಲ್ ಗಾಂಧಿಯು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಮಾಡಿದ ಟಿಪ್ಪಣಿಗೆ […]
ಆನೆಯಿಂದ ಕೊಲ್ಲಲ್ಪಟ್ಟ ಕೇರಳದ ವ್ಯಕ್ತಿಗೆ ರಾಜ್ಯದಿಂದ 15 ಲಕ್ಷ ರೂ ಪರಿಹಾರ: ಬಿಜೆಪಿ ಕಿಡಿ
ಬೆಂಗಳೂರು: ರಾಜ್ಯದಲ್ಲಿ ಸೆರೆಹಿಡಿಯಲಾದ ಆನೆಯಿಂದ ಕೊಲ್ಲಲ್ಪಟ್ಟ ಕೇರಳದ ವ್ಯಕ್ತಿಯ ಕುಟುಂಬಕ್ಕೆ ಕರ್ನಾಟಕ ಸರ್ಕಾರವು ಪರಿಹಾರ ಹಣದ ರೂಪವಾಗಿ 15 ಲಕ್ಷ ರೂಗಳನ್ನು ಕಾನೂನುಬಾಹಿರವಾಗಿ ಮಂಜೂರು ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡು ಸಂಸದರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ತೆರಿಗೆದಾರರ ಹಣವನ್ನು ಕಾಂಗ್ರೆಸ್ ದುರುಪಯೋಗಪಡಿಸಿಕೊಳ್ಳುತ್ತಿದೆ. ಅಲ್ಲದೇ ಕರ್ನಾಟಕದಲ್ಲಿ ಸೆರೆಹಿಡಿಯಲಾದ ಆನೆಯ ತುಳಿತಕ್ಕೊಳಗಾಗಿ ಕೇರಳದ ಅಜೀಶ್ ಮೃತಪಟ್ಟಿದ್ದಾರೆ ಎಂದು ಸುಳ್ಳು ಹಬ್ಬಿಸಲಾಗಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಎಕ್ಸ್‌ನಲ್ಲಿ ಕಿಡಿಕಾರಿದ್ದಾರೆ. ‘ಬರಗಾಲದಿಂದ ರಾಜ್ಯದಾದ್ಯಂತ […]