ಮೇ 31 ರಿಂದ 10 ದಿನಗಳ ಕಾಲ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ ರಾಹುಲ್ ಗಾಂಧಿ
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇ 31 ರಿಂದ 10 ದಿನಗಳ ಕಾಲ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ಎ.ಎನ್.ಐ ವರದಿ ಮಾಡಿದೆ. ಜೂನ್ 4 ರಂದು, ರಾಹುಲ್ ಗಾಂಧಿ ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಸುಮಾರು 5,000 ಅನಿವಾಸಿ ಭಾರತೀಯರ ರ‍್ಯಾಲಿ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದಲ್ಲದೆ, ಅವರು ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಲ್ಲಿ ಪ್ಯಾನೆಲ್ ಡಿಸ್ಕಶನ್ ಮತ್ತು ಭಾಷಣಕ್ಕಾಗಿ ವಾಷಿಂಗ್ಟನ್ ಮತ್ತು ಕ್ಯಾಲಿಫೋರ್ನಿಯಾಗೆ ತೆರಳಲಿದ್ದಾರೆ. ಅವರು […]
ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆ: ಕೆಳ ನ್ಯಾಯಾಲಯದ ಆದೇಶ ಮೇ 15 ರವರೆಗೆ ತಡೆಹಿಡಿದ ಪಟ್ನಾ ಹೈಕೋರ್ಟ್
ನವದೆಹಲಿ: ‘ಮೋದಿ ಉಪನಾಮ’ ಮಾನನಷ್ಟ ಪ್ರಕರಣದಲ್ಲಿ ಕೆಳ ನ್ಯಾಯಾಲಯದ ಆದೇಶವನ್ನು ಮೇ 15 ರವರೆಗೆ ತಡೆಹಿಡಿಯುವ ಮೂಲಕ ಪಾಟ್ನಾ ಹೈಕೋರ್ಟ್ ಸೋಮವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ತಾತ್ಕಾಲಿಕ ಉಪಶಮನ ನೀಡಿದೆ. ಇದಕ್ಕೂ ಮೊದಲು, ‘ಮೋದಿ ಉಪನಾಮ’ ಕುರಿತು ರಾಹುಲ್ ಗಾಂಧಿ ಆಕ್ಷೇಪಾರ್ಹ ಹೇಳಿಕೆಗಳಿಗಾಗಿ 2019 ರಲ್ಲಿ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ರಾಹುಲ್ ವಿರುದ್ಧ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಏಪ್ರಿಲ್ 12 ರಂದು ಹಾಜರಾಗುವಂತೆ ಮತ್ತು ತನ್ನ ವಾದವನ್ನು ಮಂಡಿಸುವಂತೆ ಪಾಟ್ನಾದ ಕೆಳ […]
ಲೋಕಸಭಾ ಸದಸ್ಯತ್ವ ಅನರ್ಹತೆ: ಅಧಿಕೃತ ಬಂಗಲೆ ಖಾಲಿ ಮಾಡಿದ ರಾಹುಲ್ ಗಾಂಧಿ
ನವದೆಹಲಿ: ಏಪ್ರಿಲ್ 22 ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೆಹಲಿಯಲ್ಲಿರುವ ತಮ್ಮ ಅಧಿಕೃತ ಬಂಗಲೆಯನ್ನು ಖಾಲಿ ಮಾಡಿ ತಮ್ಮ ತಾಯಿ ಸೋನಿಯಾ ಗಾಂಧಿಯವರ ನಿವಾಸಕ್ಕೆ ತೆರಳಿದರು. ಕಳೆದ ತಿಂಗಳು ಮಾನನಷ್ಟ ಮೊಕದ್ದಮೆಯಲ್ಲಿ ಕೆಳ ನ್ಯಾಯಾಲಯವು ಶಿಕ್ಷೆ ವಿಧಿಸಿದ ನಂತರ ಲೋಕಸಭೆಯಿಂದ ಅನರ್ಹಗೊಂಡಿದ್ದರಿಂದ ಏಪ್ರಿಲ್ 22 ರೊಳಗೆ ಅಧಿಕೃತ 12, ತುಘಲಕ್ ಲೇನ್ ನಿವಾಸವನ್ನು ಖಾಲಿ ಮಾಡುವಂತೆ ಕೇಳಿಕೊಳ್ಳಲಾಗಿತ್ತು. “ಸತ್ಯವನ್ನು ಹೇಳಿದ್ದಕ್ಕೆ ನಾನು ಬೆಲೆ ತೆರುತ್ತಿದ್ದೇನೆ, ಇದಕ್ಕಾಗಿ ಯಾವುದೇ ಬೆಲೆ ತೆರಲು ನಾನು ಸಿದ್ಧ, ”ಎಂದು ಅವರು […]
ಏ. 27 ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉಡುಪಿಗೆ : ಪಕ್ಷ ಪ್ರಚಾರದಲ್ಲಿ ಭಾಗಿ
ಉಡುಪಿ: ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏಪ್ರಿಲ್ 27 ರಂದು ಉಡುಪಿಗೆ ಭೇಟಿ ನೀಡಲಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಶುಕ್ರವಾರ ತಿಳಿಸಿದರು. ಕಾಂಗ್ರೆಸ್ ಭವನದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಏಪ್ರಿಲ್ 27ರಂದು ಜಿಲ್ಲೆಯ ಉಚ್ಚಿಲದಲ್ಲಿ ಮೀನುಗಾರ ಸಮುದಾಯವನ್ನು ಉದ್ದೇಶಿಸಿ ಅವರ ಸಮಸ್ಯೆಗಳು ಮತ್ತು ನೋವುಗಳನ್ನು ಅರಿಯಲಿದ್ದಾರೆ. ಕರ್ನಾಟಕ ಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಏಪ್ರಿಲ್ 23 […]
ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆ: ಕೆಳನ್ಯಾಯಾಲಯದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ ಸೂರತ್ ಸೆಷನ್ಸ್ ನ್ಯಾಯಾಲಯ
ಸೂರತ್: 2019ರ ಮಾನನಷ್ಟ ಮೊಕದ್ದಮೆಯಲ್ಲಿ ತನಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಕೆಳ ನ್ಯಾಯಾಲಯದ ಆದೇಶಕ್ಕೆ ತಡೆ ಮತ್ತು ಅಮಾನತು ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಮನವಿಯನ್ನು ಸೂರತ್ ಸೆಷನ್ಸ್ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ. ಸೆಷನ್ಸ್ ನ್ಯಾಯಾಲಯವು ಏಪ್ರಿಲ್ 13 ರಂದು ಎರಡೂ ಕಡೆಯ ವಾದವನ್ನು ಆಲಿಸಿತ್ತು ಮತ್ತು ತೀರ್ಪನ್ನು ಏಪ್ರಿಲ್ 20 ಕ್ಕೆ ಕಾಯ್ದಿರಿಸಿತ್ತು. ಇಂದು ನ್ಯಾಯಾಲಯವು ರಾಹುಲ್ ಗಾಂಧಿಯ ದೋಷಾರೋಪಣೆಯನ್ನು ತಡೆಹಿಡಿದಿದ್ದರೆ ಅಥವಾ ಅಮಾನತುಗೊಳಿಸಿದ್ದರೆ, ಕಾಂಗ್ರೆಸ್ ನಾಯಕ ಸಂಸತ್ತಿಗೆ ಮರುಪ್ರವೇಶಿಸಬಹುದಿತ್ತು. ಕಾನೂನಿನಡಿಯಲ್ಲಿ ಇನ್ನೂ […]