ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯಲ್ಲ; ದೇಶ ವಿಭಜನೆಯ ಪ್ರಾಯಶ್ಚಿತ್ತ ಯಾತ್ರೆ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದಿಂದ ದೇಶಕ್ಕೆ ದೊರೆತ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಪಕ್ಷ ತನ್ನದೇ ಸಾಧನೆ ಎಂಬಂತೆ ಬಿಂಬಿಸುವ ಪ್ರಯತ್ನದ ಮೂಲಕ ಸ್ವಾತಂತ್ರ್ಯ ಯೋಧರನ್ನು ಅವಮಾನಿಸುವುದು ಹಾಗೂ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಅಪಪ್ರಚಾರಗೈಯುವುದು ಕಾಂಗ್ರೆಸ್ ನ ‘ಭಾರತ್ ಜೋಡೋ’ ಯಾತ್ರೆಯ ಮೂಲ ಉದ್ದೇಶವಾಗಿದೆ. ಕಾಂಗ್ರೆಸ್ ನ ಅನೇಕ ಹಿರಿಯ ಮುಖಂಡರು ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರ ವೈಫಲ್ಯದ ಗುಣಗಾನಗೈದು ಕಾಂಗ್ರೆಸ್ಸನ್ನು ಅವ್ಯಾಹತವಾಗಿ ತೊರೆಯುತ್ತಿರುವ ಸಂದಿಗ್ಧ ಸನ್ನಿವೇಶದಲ್ಲಿ ಗೊಂದಲದ ಗೂಡಾಗಿರುವ ಕಾಂಗ್ರೆಸ್ ಇದೀಗ […]

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಗೆ ಸಜ್ಜಾದ ಕಾರವಾನ್ ಮಾದರಿ ಕಂಟೇನರ್ ಗಳು

ನವದೆಹಲಿ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಭಾರತ್ ಜೋಡೋ ಯಾತ್ರೆಯನ್ನು ಆರಂಭಿಸಿದ್ದು, ಇದಕ್ಕಾಗಿ ಕಂಟೇನರ್ ಗಳನ್ನು ಬೆಡ್ ರೂಂ ಮಾದರಿ ವಿನ್ಯಾಸಗೊಳಿಸಲಾಗಿದೆ. ಈ ಎಲ್ಲಾ ಕಂಟೆನರ್ ಗಳನ್ನು ಹಗಲು ಹೊತ್ತಿನಲ್ಲಿ ಒಂದೆಡೆ ನಿಲ್ಲಿಸಲಾಗುತ್ತದೆ. ಈ ಹೊತ್ತಿನಲ್ಲಿ ಇದೊಂದು ಸಣ್ಣ ಹಳ್ಳಿಯಂತೆ ಕಾಣುತ್ತದೆ. ಸುಮಾರು 60 ಟ್ರಕ್ ಗೆ ಆರೋಹಿಸಲಾದ ಕಂಟೈನರ್ ವ್ಯಾನ್‌ಗಳು ಹವಾನಿಯಂತ್ರಿತ ಮಲಗುವ ಕೋಣೆಗಳಾಗಿ ಮಾರ್ಪಟ್ಟಿವೆ. ಮುಂದಿನ ಐದು ತಿಂಗಳವರೆಗಿನ ರಾಹುಲ್ ಗಾಂಧಿ ಯಾತ್ರೆಯಲ್ಲಿ ಇವು ಭಾರತದಾದ್ಯಂತ ಚಲಿಸಲಿವೆ. ಕಂಟೈನರ್‌ಗಳನ್ನು ಅದರಲ್ಲಿರುವ […]

ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆ ಕುರಿತು ಸಭೆ: ವೈಯಕ್ತಿಕ ಭೇಟಿಗಾಗಿ ವಿದೇಶಕ್ಕೆ ತೆರಳಿದ ರಾಹುಲ್ ಗಾಂಧಿ

ನವದೆಹಲಿ: ಮಂಗಳವಾರದಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ‘ಸಣ್ಣ ವೈಯಕ್ತಿಕ ಭೇಟಿಗೆ’ ವಿದೇಶಕ್ಕೆ ತೆರಳಿದ್ದು, ರಾಷ್ಟ್ರಪತಿ ಚುನಾವಣೆ ಮತ್ತು ಜುಲೈ 18 ರಂದು ನಡೆಯಲಿರುವ ಸಂಸತ್ತಿನ ಮುಂಗಾರು ಅಧಿವೇಶನದ ಮುನ್ನ ಭಾನುವಾರದ ವೇಳೆಗೆ ಹಿಂತಿರುಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ, ಪಕ್ಷವು ಅವರ ಭೇಟಿಯ ಯಾವುದೇ ವಿವರಗಳನ್ನು ಬಹಿರಂಗಪಡಿಸಿಲ್ಲ ಮತ್ತು ಅದನ್ನು ವೈಯಕ್ತಿಕ ಭೇಟಿ ಎಂದಷ್ಟೆ ಹೇಳಿದೆ. ಪದೇ ಪದೇ ವಿದೇಶಕ್ಕೆ ಭೇಟಿ ನೀಡುತ್ತಿರುವುದಕ್ಕಾಗಿ ಬಿಜೆಪಿಯಿಂದ ಆಗಾಗ್ಗೆ ಟೀಕೆಗೆ ಒಳಗಾಗಿರುವ ರಾಹುಲ್, ಗುರುವಾರ ನಡೆಯಲಿರುವ ‘ಭಾರತ್ […]

ವಯನಾಡಿನಲ್ಲಿರುವ ರಾಹುಲ್ ಗಾಂಧಿ ಕಚೇರಿ ಧ್ವಂಸ: ಎಸ್‌ಎಫ್‌ಐ ಮೇಲೆ ಆರೋಪ ಹೊರಿಸಿದ ಯುವ ಕಾಂಗ್ರೆಸ್

ಕೇರಳ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಯನಾಡ್‌ನಲ್ಲಿರುವ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ. ಕೆಲವು ಕಿಡಿಗೇಡಿಗಳು ಕಚೇರಿಯೊಳಗೆ ನುಗ್ಗಿ ಕಚೇರಿಯನ್ನು ಧ್ವಂಸಗೊಳಿಸುತ್ತಿರುವ ವೀಡಿಯೋ ಒಂದನ್ನು ಮಾಧ್ಯಮ ಸಂಸ್ಥೆ ಎ ಎನ್ ಐ ಹಂಚಿಕೊಂಡಿದೆ. ರಾಹುಲ್ ಗಾಂಧಿ ಅವರ ವಯನಾಡ್ ಕಚೇರಿಯ ಗೋಡೆಯನ್ನು ಹತ್ತಿ ಅದನ್ನು ಧ್ವಂಸಗೊಳಿಸುತ್ತಿದ್ದಾಗ, ಗೂಂಡಾಗಳು ಎಸ್‌ಎಫ್‌ಐ ಧ್ವಜಗಳನ್ನು ಹಿಡಿದಿದ್ದರು ಎಂದು ಭಾರತೀಯ ಯುವ ಕಾಂಗ್ರೆಸ್ ಟ್ವೀಟ್‌ನಲ್ಲಿ ಆರೋಪಿಸಿದೆ. “ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಎಸ್‌ಎಫ್‌ಐ ಕಾರ್ಯಕರ್ತರು ಮತ್ತು ಮುಖಂಡರ ಗುಂಪು ವಯನಾಡ್ ಸಂಸದ ರಾಹುಲ್ […]

ಕೇಂದ್ರದಿಂದ ರಾಹುಲ್ ಗಾಂಧಿ ವಿರುದ್ದ ಸುಳ್ಳು ಪ್ರಕರಣ ಸೃಷ್ಟಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ

ಉಡುಪಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ವಿರುದ್ಧ ಸುಳ್ಳು ಪ್ರಕರಣ ಸೃಷ್ಟಿಸಿ ಜಾರಿ ನಿರ್ದೇಶನಾಲಯ (ಇಡಿ)ದ ತನಿಖೆ ಹೆಸರಲ್ಲಿ ಸಂಸ್ಥೆಯ ದುರ್ಬಳಕೆ ಹಾಗೂ ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕರ ಮೇಲೆ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಜೂನ್ 21, ಮಂಗಳವಾರದಂದು ಸಂಜೆ 4.00 ಗಂಟೆಗೆ ಅಜ್ಜರಕಾಡಿನ ಹುತಾತ್ಮರ ಸ್ಮಾರಕದ ಎದುರು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದೆ. ಈ ಬೃಹತ್ ಪ್ರತಿಭಟನೆಯಲ್ಲಿ ಬ್ಲಾಕ್ […]