ಕೋಟ್ಪಾ ದಳದಿಂದ ದಾಳಿ: ದಂಡ ವಸೂಲಿ

ಉಡುಪಿ: ಜಿಲ್ಲೆಯಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನಗೊಳಿಸುವ ಸಲುವಾಗಿ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಬ್ರಹ್ಮಾವರ ತಾಲೂಕು ಸೈಬ್ರಕಟ್ಟೆ ಸುತ್ತಮುತ್ತ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ಇಂದು ದಾಳಿ ನಡೆಸಿ ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ 43 ಪ್ರಕರಣ ದಾಖಲಿಸಿ 3300 ರೂ. ದಂಡ ವಸೂಲಿ ಮಾಡಲಾಯಿತು. ಈ ಸಂದರ್ಭದಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಕ್ಷೇತ್ರ […]