ಪಡುಬಿದ್ರಿ: ಕೋಟ್ಪಾ ದಾಳಿ; 20 ಪ್ರಕರಣ ದಾಖಲು

ಪಡುಬಿದ್ರಿ : ಜಿಲ್ಲೆಯಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಸೋಮವಾರದಂದು ಉಡುಪಿ ತಾಲೂಕಿನ ಪಡುಬಿದ್ರಿ ಹಾಗೂ ಇಂಡಸ್ಟ್ರಿಯಲ್ ಏರಿಯಾ ನಂದಿಕೂರು ವ್ಯಾಪ್ತಿಯ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4 ಮತ್ತು 6(ಎ) ಅಡಿಯಲ್ಲಿ ಒಟ್ಟು 20 ಪ್ರಕರಣ ದಾಖಲಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಕಾರ್ಮಿಕ […]

ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ: 42 ಪ್ರಕರಣ ದಾಖಲು

ಉಡುಪಿ: ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಇಂದು ಉಡುಪಿ ನಗರ ವ್ಯಾಪ್ತಿ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4 ಮತ್ತು 6(ಎ) ಅಡಿಯಲ್ಲಿ ಒಟ್ಟು 42 ಪ್ರಕರಣ ದಾಖಲಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ರಾಷ್ಟೀಯ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರ್ತಿ ಮಂಜುಳಾ […]

ನಿಷೇಧಿತ ಪ್ಲಾಸ್ಟಿಕ್ ಮಾರಾಟ: 75 ಕೆ.ಜಿ ವಶ; ದಂಡ ವಸೂಲಿ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ದೊಡ್ಡಣಗುಡ್ಡೆ ಬಳಿ ಅಂಗಡಿಗಳಿಗೆ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದ ಇಕ್ಬಾಲ್ ಎಂಬಾತನ ವಾಹನದ ಮೇಲೆ ಬುಧವಾರದಂದು ನಗರಸಭೆ ಆರೋಗ್ಯ ಶಾಖೆಯ ಅಧಿಕಾರಿಗಳು ದಾಳಿ ನಡೆಸಿ, 75 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 5000 ರೂ. ದಂಡ ವಿಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ನಗರಸಭೆಯ ಪರಿಸರ ಅಭಿಯಂತರರು, ಹಿರಿಯ ಆರೋಗ್ಯ ನಿರೀಕ್ಷಕರು, ಸ್ಯಾನಿಟರಿ ಸೂಪರ್‌ವೈಸರ್ ಹಾಗೂ ಪೌರಕಾರ್ಮಿಕರು ಭಾಗವಹಿಸಿದ್ದರು. ಉದ್ದಿಮೆದಾರರು ಹಾಗೂ ವ್ಯಾಪಾರಿಗಳು ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಉಪಯೋಗಿಸುವುದು ಕಂಡು ಬಂದಲ್ಲಿ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಲಾಗುವುದು. ಪ್ಲಾಸ್ಟಿಕ್ […]

ಒಂದು ತಿಂಗಳಲ್ಲಿ 127 ಟನ್ ನಿಷೇಧಿತ ಪ್ಲಾಸ್ಟಿಕ್ ವಶ: 37 ಲಕ್ಷ ರೂಪಾಯಿ ದಂಡ ವಸೂಲಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜುಲೈ ತಿಂಗಳೊಂದರಲ್ಲೇ ರಾಜ್ಯಾದ್ಯಂತ ಹಠಾತ್ ತಪಾಸಣೆ ನಡೆಸಿ 127.052 ಟನ್ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ವಶಪಡಿಸಿಕೊಂಡಿದೆ ಮತ್ತು 37 ಲಕ್ಷ ರೂಪಾಯಿ ದಂಡವನ್ನು ಸಂಗ್ರಹಿಸಿದೆ. ಅಂಗಡಿಗಳು, ಉತ್ಪಾದನಾ ಘಟಕಗಳು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳ ಮೇಲಿನ ದಾಳಿಯಲ್ಲಿ, ಜುಲೈನಲ್ಲಿ 22,116 ತಪಾಸಣೆಗಳನ್ನು ನಡೆಸಲಾಗಿದ್ದು 15,629 ಉಲ್ಲಂಘನೆಗಳು ಕಂಡುಬಂದಿವೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಹಿರಿಯ ಕೆಎಸ್‌ಪಿಸಿಬಿ ಅಧಿಕಾರಿಯೊಬ್ಬರು ಡಿಎಚ್‌ಗೆ ನೀಡಿದ ಸಂದರ್ಶನದಲ್ಲಿ, ಸೂಕ್ತ ಪರ್ಯಾಯದ ಕೊರತೆಯಿಂದಾಗಿ ಏಕ […]

ಉಡುಪಿಯಲ್ಲಿ ಎಸಿಬಿ ದಾಳಿ: ಸಣ್ಣ ನೀರಾವರಿ ಅಧಿಕಾರಿ ಹರೀಶ್ ಖಜಾನೆಯಲ್ಲಿ 1.5 ಕೆಜಿ ಚಿನ್ನ, ಮುಕ್ಕಾಲು ಕೆಜಿ ಬೆಳ್ಳಿ!

ಉಡುಪಿ: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಉಪವಿಭಾಗ ಇಲಾಖೆಯ ಸಹಾಯಕ ಅಭಿಯಂತರ ಹರೀಶ್ ಅವರ ಕೊರಂಗ್ರಪಾಡಿಯ ಬೈಲೂರು ನಿವಾಸಕ್ಕೆ ಶುಕ್ರವಾರ ಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಹರೀಶ ಖಜಾನೆಯಲ್ಲಿ 1.5 ಕೆಜಿ ಚಿನ್ನ, ಮುಕ್ಕಾಲು ಕೆಜಿ ಬೆಳ್ಳಿ ಪತ್ತೆಯಾಗಿದೆ. ಇದರ ಜೊತೆಗೆ ಇನ್ನೋವಾ, ಆಲ್ಟೋ ಕಾರುಗಳು ಹಾಗೂ 2 ದ್ವಿಚಕ್ರ ವಾಹನಗಳು ಪತ್ತೆಯಾಗಿವೆ. 4.30 ಲ.ರೂ ನಗದು ಹಾಗೂ ಹಲವಾರು ದಾಖಲೆ ಪತ್ರಗಳು ಅಧಿಕಾರಿಗಳಿಗೆ ದೊರೆತಿವೆ. ಹಾವಂಜೆ ಮತ್ತು ಪೆರ್ಡೂರಿನಲ್ಲಿ ಪತ್ನಿಯ ಹೆಸರಿನಲ್ಲಿ 5 […]