2024 ರೊಳಗೆ 67956 ಕಿ.ಮೀ. ಉದ್ದದ ರೈಲು ಮಾರ್ಗ ವಿದ್ಯುತ್ತೀಕರಣ ಯೋಜನೆ: ಶೋಭಾ ಕರಂದ್ಲಾಜೆ

ಉಡುಪಿ: ಕೊಂಕಣ ರೈಲ್ವೆಯು ಕರಾವಳಿಯ ಜೀವನಾಡಿಯಾಗಿದ್ದು, ಕರಾವಳಿಯನ್ನು ಉತ್ತರ ಭಾರತದೊಂದಿಗೆ ಜೋಡಿಸುವ ಮಾರ್ಗವಾಗಿದೆ. ಪರಿಸರದ ಹಲವು ಅಡೆತಡೆಗಳನ್ನು ಎದುರಿಸಿ ಆರಂಭಗೊಂಡ ಈ ರೈಲ್ವೆ ಮಾರ್ಗವನ್ನು ಪ್ರಸ್ತುತ ವಿದ್ಯುತ್ತೀಕರಣಗೊಳಿಸಿರುವುದರಿಂದ ವಾರ್ಷಿಕವಾಗಿ 300 ಕೋಟಿ ರೂ. ಉಳಿತಾಯವಾಗಲಿದೆ. ದೇಶದಲ್ಲಿ 2024 ರೊಳಗೆ 67956 ಕಿ.ಮೀ. ರೈಲು ಮಾರ್ಗವನ್ನು ವಿದ್ಯುತ್ತೀಕರಣಗೊಳಿಸುವ ಯೋಜನೆಯಿದ್ದು, ಈಗಾಗಲೇ 45881 ಕಿ.ಮೀ. ಯೋಜನೆ ಪೂರ್ಣವಾಗಿದ್ದು, ಇದಕ್ಕಾಗಿ 13500 ಕೋಟಿ ರೂ. ವೆಚ್ಚವಾಗಿದೆ. ಇನ್ನು 2 ವರ್ಷದಲ್ಲಿ ಬಾಕಿ ಕಾಮಗಾರಿ ಪೂರ್ಣಗೊಳ್ಳಲಿದೆ. ಎಂದು ಕೇಂದ್ರ ಕೃಷಿ ಮತ್ತು ರೈತ […]