ಮಹಾರಾಷ್ಟ್ರದಲ್ಲಿ ಮಳೆ ಅಬ್ಬರದ ಹಿನ್ನೆಲೆ ಚಿಕ್ಕೋಡಿಯ ಹಲವು ಸೇತುವೆಗಳು ಜಲಾವೃತ

ಚಿಕ್ಕೋಡಿ : ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿದ ಧಾರಾಕಾರ ಮಳೆಗೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಹಲವು ಕೆಳ ಹಂತದ ಸೇತುವೆಗಳು ಜಲಾವೃತವಾಗಿವೆ. ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್​ನಿಂದ ಕೃಷ್ಣಾನದಿಗೆ 49,500 ಕ್ಯೂಸೆಕ್ ನೀರು ಹರಿದು ಬರುತ್ತಿರುವ ಹಿನ್ನೆಲೆ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿ, ಮೈದುಂಬಿ ಹರಿಯುತ್ತಿದೆ.ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ಮಳೆಯ ಅಬ್ಬರ ಹೆಚ್ಚಳವಾಗಿದೆ. ವಿನಯಕುಮಾರ ರಜಪೂತ ಎಂಬುವವರಿಗೆ ಸೇರಿದ ಕಾರಿನ ಮೇಲೆ ಮರವೊಂದು ಬಿದ್ದಿದೆ. ಅದೃಷ್ಟವಶಾತ್ ಸಾವಿನ ದವಡೆಯಿಂದ ಅವರು ಪಾರಾಗಿದ್ದಾರೆ. ಜಿಲ್ಲೆಯಾದ್ಯಂತ ಈಗಾಗಲೇ 83 ಸೇತುವೆಗಳ […]