ಹವಾಮಾನ ಇಲಾಖೆಯಿಂದ ಮುನ್ಸೂಚನೆ ಮುಂದಿನ ಐದು ದಿನಗಳ ಕಾಲ ಕರಾವಳಿ ಭಾಗದಲ್ಲಿ ಮಳೆ

ಬೆಂಗಳೂರು: ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಕರಾವಳಿಯಲ್ಲಿ ಮುಂದಿನ ಐದು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮಲೆನಾಡು, ದಕ್ಷಿಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆ ಸುರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜೂ 26ರಿಂದ ಜೂ 30ರವರೆಗೆ ಭಾರೀ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದಿದೆ.ರಾಜ್ಯದಲ್ಲಿ ಮುಂದಿನ ತಿಂಗಳು ಮಳೆ ಪ್ರಮಾಣ ಎಷ್ಟಿರಲಿದೆ […]