ಉಡುಪಿ, ದಕ್ಷಿಣ ಕನ್ನಡ ಸಹಿತ ರಾಜ್ಯದ 9 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು:‌ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮೇ 5ರಿಂದ 7ರ ವರೆಗೆ ಹವಾಮಾನ ವೈಪರೀತ್ಯದಿಂದಾಗಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಎರಡು ದಿನಗಳವರೆಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ’.