ಇಂದು (ಮೇ30) ಉಡುಪಿ ಜಿಲ್ಲೆಯ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಾದ್ಯಂತ ಹೆಚ್ಚಿನ ಮಳೆ ಆಗುತ್ತಿರುವ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ ಇಂದು ದಿನಾಂಕ 30-5-2025 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ.ಕೆ ರವರು ಆದೇಶಿಸಿದ್ದಾರೆ. ಎಸ್ .ಎಸ್. ಎಲ್ .ಸಿ ಪೂರಕ ಪರೀಕ್ಷೆಯು ಎಂದಿನಂತೆ ನಡೆಯಲಿದೆ.

ದ.ಕ.‌ಜಿಲ್ಲೆ: ಭಾರೀ ಮಳೆ ಹಿನ್ನೆಲೆ ಜು.20ರಂದು ಶಾಲಾ ಕಾಲೇಜುಗಳಿಗೆ ರಜೆ‌

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಸುರಿಯುತ್ತಿರುವ ಮಳೆ ಹಾಗೂ ‌ಮುಂದಿನ‌ ಎರಡು ದಿನ‌ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಜು. 20ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಶುಕ್ರವಾರ  ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.ಜು. 22  ವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಜತೆಗೆ ಮೀನುಗಾರಿಗೆ ಕಡ್ಡಾಯವಾಗಿ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದ್ದು, ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.