ನಾಳೆ ಕರ್ನಾಟಕಕ್ಕೆ ಮುಂಗಾರು ಆಗಮನ ನಿರೀಕ್ಷೆ: ಬಿಪರ್‌ಜಾಯ್​ ಚಂಡಮಾರುತದಿಂದಾಗಿ ಮಂಗಳೂರಿಗೆ ತಂಪೆರೆದ ಮಳೆರಾಯ

ಮಂಗಳೂರು: ನಿನ್ನೆ ಮುಂಗಾರು ಮಳೆ ಕೇರಳ ಪ್ರವೇಶಿಸಿದೆ. ನಾಳೆ ಕರ್ನಾಟಕ ಪ್ರವೇಶಿಸುವ ಸಾಧ್ಯತೆ ಇದೆ. ಬಿಸಿಲಿನ ಧಗೆಗೆ ಕಂಗೆಟ್ಟಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಮುಂಗಾರು ಮಳೆಯ ಆಗಮನವಾಯಿತು. ವಾಡಿಕೆಯಂತೆ ಜೂನ್ 1ಕ್ಕೆ ಬರಬೇಕಿದ್ದ ಮುಂಗಾರು ತೀವ್ರ ವಿಳಂಬವಾಗಿದ್ದು, ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಬೇಸಿಗೆಯಿಂದ ಕಂಗೆಟ್ಟಿದ್ದ ಜನರಿಗೆ ಇಂದು ಬೆಳಗ್ಗೆ ಆರಂಭವಾದ ಮಳೆ ಖುಷಿ ಕೊಟ್ಟಿತು. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಉಂಟಾದ ಬಿಪರ್‌ಜಾಯ್​ ಚಂಡಮಾರುತದ ಪ್ರಭಾವದಿಂದ ಇಂದಿನಿಂದ ಮಳೆ ಆರಂಭವಾಗಿದೆ. ಕೇರಳ ಭಾಗದಿಂದ ಉತ್ತರಕ್ಕೆ […]