ಕರಾವಳಿಯ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್:ಮುಂದಿನ 48 ಗಂಟೆಗಳ ಕಾಲ ಮಳೆಯಾಗುವ ಸಾಧ್ಯತೆ ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಇನ್ನೆರಡು ದಿನ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಿಂಚು ಗುಡುಗಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು 30-40 ಕಿ.ಮೀ ಇರಲಿದೆ. ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ ಮೀ ಇಂದ 55 ಕಿ ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆಮುಂದಿನ 48 ಗಂಟೆಗಳ ಕಾಲ ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮತ್ತು ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, […]