ಮೇ.6 ರವರೆಗೂ ರಾಜ್ಯದ ವಿವಿಧೆಡೆ ‘ಮಳೆ’ ಸಾಧ್ಯತೆ..!!

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆ ರಾಜ್ಯದ ಹಲವು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್, ಯಾದಗಿರಿ […]