ನಾಳೆಯಿಂದ ಮೂರ್ನಾಲ್ಕು ದಿನ ರಾಜ್ಯಾದ್ಯಂತ ವ್ಯಾಪಕ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಗಳಿದ್ದು, ಇದರ ಪರಿಣಾಮ ಜುಲೈ 8ರಿಂದ 12ರವರೆಗೆ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 11ರಂದು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಗಳಿದ್ದು ಇದರ ಪರಿಣಾಮ ಕರಾವಳಿ, ದಕ್ಷಿಣ ಹಾಗೂ ಉತ್ತರ ಕರ್ನಾಟಕ ಒಳನಾಡು ಪ್ರದೇಶಗಳಲ್ಲಿ ಮಳೆಯಾಗುವ ಮೂನ್ಸೂಚನೆಯಿದೆ. ಕರಾವಳಿ ಭಾಗದಲ್ಲಿ ಜುಲೈ 8 ರಂದು ಯೆಲ್ಲೋ ಅಲರ್ಟ್​, ಜುಲೈ 9 ರಿಂದ 12 ರವರೆಗೆ ಆರೇಂಜ್​ ಅಲರ್ಟ್​ ಘೋಷಿಸಲಾಗಿದೆ ಎಂದು […]