ಮೇ 17 ರಿಂದ 21ವರೆಗೆ ಕರ್ನಾಟಕ ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ: ಕರ್ನಾಟಕ ಕರಾವಳಿಯ ವಿವಿಧ ಭಾಗಗಳಲ್ಲಿ ಮೇ 17 ರಿಂದ 21ವರೆಗೆ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉದ್ದಕ್ಕೂ ಸಮುದ್ರದಲ್ಲಿ ಗಾಳಿಯ ವೇಗ ಗಂಟೆಗೆ 40-50 ಕಿಮೀ ತಲುಪುವ ಸಾಧ್ಯತೆ ಇರುವುದರಿಂದ ಮುಂದಿನ 24 ಗಂಟೆಗಳವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಮೇ 19 ರಂದು 205 ಮಿಮೀ, ಮೇ 18 ಮತ್ತು 20 ರಂದು 115 ಮಿಮೀ ಹಾಗೂ ಮೇ 17 ಮತ್ತು […]
ಮಂಗಳೂರು: ದ.ಕ.ಜಿಲ್ಲೆಯಾದ್ಯಂತ ಬಿರುಸಿನ ಮಳೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಶುಕ್ರವಾರ ಧಾರಾಕಾರವಾಗಿ ಮಳೆ ಸುರಿಯಿತು. ಮುಂಜಾನೆಯಿಂದ ಧಾರಾಕಾರ ಮಳೆಯಾದ ಹಿನ್ನೆಲೆಯಲ್ಲಿ ಮಂಗಳೂರಿನ ವಿವಿಧೆಡೆ ನೀರು ತುಂಬಿ ಜನರ ಓಡಾಟಕ್ಕೆ ಅಡಚಣೆ ಉಂಟಾಯಿತು. ಪಾಂಡೇಶ್ವರ ಸಮೀಪದ ಸುಭಾಷ್ ನಗರ ಪ್ರಥಮ ಕ್ರಾಸ್ ಸಂಪೂರ್ಣ ಜಲಾವೃತವಾಗಿತ್ತು. ಹಾಗೆಯೇ ಕೇಂದ್ರ ರೈಲು ನಿಲ್ದಾಣಕ್ಕೆ ಮತ್ತೆ ನೀರು ನುಗ್ಗಿದೆ. ಕೃತಕ ನೆರೆಯಿಂದ ರೈಲು ನಿಲ್ದಾಣದ ಆವರಣ ಕೆರೆಯಂತಾಗಿತ್ತು. ರೈಲು ನಿಲ್ದಾಣಕ್ಕೆ ಆಗಮಿಸುವ, ನಿರ್ಗಮಿಸುವ ಪ್ರಯಾಣಿಕರು ಪರದಾಡುವಂತಾಗಿದೆ. ನಗರದ ಫಳ್ನೀರ್ ರಸ್ತೆ, ಕೊಟ್ಟಾರ ಚೌಕಿ ಜಲಾವೃತಗೊಂಡಿತು. ಒಳಚರಂಡಿಯಲ್ಲಿ […]
ದ.ಕ ಜಿಲ್ಲೆಯಾದ್ಯಂತ ಉತ್ತಮ ಮಳೆ: ಹಲವೆಡೆ ಹಾನಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೋಮವಾರವೂ ಭಾರೀ ಮಳೆ ಸುರಿಯುತ್ತಿದೆ. ಕಳೆದೆರಡು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಕೆಲವೆಡೆ ಹಾನಿ ಸಂಭವಿಸಿದೆ. ಅಮ್ಮುಂಜೆ ಕಲಾಯಿ ಹೊಸನಗರದಲ್ಲಿ ಅಂಗಡಿ ಮೇಲೆ ಬಿದ್ದಿದ್ದು, ಸ್ಥಳೀಯರಿಂದ ಮರ ತೆರವು ಕಾರ್ಯಾಚರಣೆ ನಡೆಯಿತು. ಅಂಬ್ಲಮೊಗರುವಿನ ಮದಕ ಗುಡ್ಡೆಯಲ್ಲಿ ಅಬ್ಬಾಸ್ ಮತ್ತು ರಝಾಕ್ ಎಂಬವರ ಮನೆಗೆ ವಿದ್ಯುತ್ ಕಂಬ ಬಿದ್ದು ಹಾನಿಯಾಗಿದೆ. ಗುಡ್ಡ ಕುಸಿತಕ್ಕೆ ಧರೆಗುರುಳಿದ ವಿದ್ಯುತ್ ಕಂಬ. ಮನೆಯವರ ಸಮಯ ಪ್ರಜ್ನೆಯಿಂದ ಅನಾಹುತ ತಪ್ಪಿದಂತಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ, ಬಂಟ್ವಾಳ, ಬೆಳ್ತಂಗಡಿ, […]