ಉಡುಪಿ ಜಿಲ್ಲೆಯಲ್ಲಿ ಐಸಿಯು ಬೆಡ್ ಗಳನ್ನು ಹೆಚ್ಚಿಸಿ: ಜಿಲ್ಲಾಧಿಕಾರಿ ಜಿ. ಜಗದೀಶ್
ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯಿಂದ ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಮುಂಜಾಗ್ರತೆಯಾಗಿ ಜಿಲ್ಲೆಯ ಸರಕಾರಿ ಮತು ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಐಸಿಯು ಬೆಡ್ ಗಳ ಸಂಖ್ಯೆಯ ಹೆಚ್ಚಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ವೈದ್ಯಕೀಯ ಎಕ್ಸ್ ಪೋರ್ಟ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಹೆಚ್ಚು ಪಾಸಿಟಿವ್ ಪ್ರಕರಣಗಳು ಕಂಡುಬಂದರೂ ಕೂಡಾ […]