ಅಶ್ಲೀಲ ಚಿತ್ರಗಳ ನಿರ್ಮಾಣ: ರಾಜ್ ಕುಂದ್ರಾಗೆ 14 ದಿನ ನ್ಯಾಯಾಂಗ ಬಂಧನ

ಮುಂಬೈ: ಅಶ್ಲೀಲ ಚಿತ್ರಗಳ ನಿರ್ಮಾಣ ಮತ್ತು ಕೆಲವು ಆ್ಯಪ್‌ಗಳ ಮೂಲಕ ಅವುಗಳನ್ನು ಬಿತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿ ಉದ್ಯಮಿ ಮತ್ತು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾನನ್ನು 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಪ್ರಕರಣದಲ್ಲಿ ರಾಜ್‌ ಕುಂದ್ರಾ ಸೇರಿದಂತೆ ಪೊಲೀಸ್‌ ವಶದಲ್ಲಿರುವ ಎಲ್ಲಾ 10 ಆರೋಪಿಗಳಿಗೂ 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.