ಪಾಕ್ ಆಕ್ರಮಿತ ಕಾಶ್ಮೀರ ನಮ್ಮದು, ಅಲ್ಲಿನ ಜನರೇ ಭಾರತದೊಂದಿಗೆ ವಿಲೀನಗೊಳ್ಳುವ ಬೇಡಿಕೆ ಇಟ್ಟಿದ್ದಾರೆ: ರಾಜನಾಥ್ ಸಿಂಗ್

ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರದ (POK) ಜನರೇ ಭಾರತದೊಂದಿಗೆ ವಿಲೀನಗೊಳ್ಳುವ ಬೇಡಿಕೆಯನ್ನು ಎತ್ತುತ್ತಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajanath Singh) ಭಾನುವಾರ ಹೇಳಿದ್ದಾರೆ. ಪಿಒಕೆ ಜನರು ಭಾರತದೊಂದಿಗೆ ವಿಲೀನಗೊಳ್ಳುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಾಶ್ಮೀರದ ಬಗ್ಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ಇತ್ತೀಚಿನ ಟೀಕೆಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಜನಾಥ್ ಸಿಂಗ್, ” ಅವರು ಎಂದಾದರೂ ಕಾಶ್ಮೀರವನ್ನು ಪಡೆಯಬಹುದೆ? ಅವರು ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಚಿಂತಿಸಬೇಕು. ದಾಳಿ ಮಾಡುವ […]

ಮೋದಿ ಕನಸಿನ ಸದೃಢ ಸ್ವಾವಲಂಬಿ ‘ಹೊಸ ಭಾರತ’ಕ್ಕಾಗಿ ಹೊಸ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಿ: ರಾಜನಾಥ್ ಸಿಂಗ್

ಮಣಿಪಾಲ: ಯುವಕರು ಹೊಸ ಆವಿಷ್ಕಾರ, ತಂತ್ರಜ್ಞಾನಗಳನ್ನು ಅಭಿವೃದ್ದಿ ಪಡಿಸಿ ಹೊಸ ಕಂಪನಿ, ಸಂಶೋಧನಾ ಸಂಸ್ಥೆ ಮತ್ತು ಸ್ಟಾರ್ಟ್ ಅಪ್ ಗಳನ್ನು ಸ್ಥಾಪಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಲಿಷ್ಠ ಮತ್ತು ಸ್ವಾವಲಂಬಿ ‘ಹೊಸ ಭಾರತ’ದ ಕನಸನ್ನು ಸಾಕಾರಗೊಳಿಸಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ ಕರೆ ನೀಡಿದರು. ಅವರು ಶುಕ್ರವಾರದಂದು ಮಾಹೆಯ 30 ನೇ ಘಟಿಕೋತ್ಸವದ ಮೊದಲನೆ ದಿನ ಮತ್ತು ಮಣಿಪಾಲ್ ಸ್ಕೂಲ್ ಆಫ್ ಆರ್ಕಿಟೆಕ್ಚರ್‌ನ ಹೊಸ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ದೇಶದ ಯುವಕರ ಶಕ್ತಿಯನ್ನು ಜಗತ್ತೇ ಗುರುತಿಸುತ್ತಿದೆ. […]

ನವೆಂಬರ್ 18 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಡುಪಿ ಪ್ರವಾಸ

ಉಡುಪಿ ಕೇಂದ್ರ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಅವರು ನವೆಂಬರ್ 18 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಮಧ್ಯಾಹ್ನ 1 ಗಂಟೆಗೆ ಉಡುಪಿಗೆ ಆಗಮಿಸಿ, 1.40 ಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಇಲ್ಲಿನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ, 2.10 ಕ್ಕೆ ಮಾಹೆಯ 30 ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳಲಿದ್ದಾರೆ.