ರಾಜಸ್ಥಾನ: ಅರ್ಚಕರೊಬ್ಬರನ್ನು ಜೀವಂತವಾಗಿ ಸುಟ್ಟುಹಾಕಿದ ದುಷ್ಕರ್ಮಿಗಳು

ಜೈಪುರ: ಅರ್ಚಕರೊಬ್ಬರನ್ನು ಐವರು ದುಷ್ಕರ್ಮಿಗಳು ಜೀವಂತವಾಗಿ ಸುಟ್ಟುಹಾಕಿದ ಅಮಾನವೀಯ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ಈ ಐವರು ಜಿಲ್ಲೆಯ ದೇವಾಲಯದ ಭೂಮಿಯನ್ನು ಅತಿಕ್ರಮಿಸಲು ಮುಂದಾಗಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅರ್ಚಕರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಕ್ನಾ ಗ್ರಾಮದಲ್ಲಿ ಬುಧವಾರ ಐವರು ಆರೋಪಿಗಳು ಅರ್ಚಕ ಬಾಬು ಲಾಲ್ ವೈಷ್ಣವ್ ಎಂಬುವವರ ಮೇಲೆ ಪೆಟ್ರೊಲ್ ಎರಚಿ ಬೆಂಕಿ ಹಚ್ಚಿದ್ದರು. ಗಂಭೀರ ಪರಿಸ್ಥಿತಿಯಲ್ಲಿದ್ದ ಅರ್ಚಕರನ್ನು ಜೈಪುರದ ಎಸ್‌ಎಂಎಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಗುರುವಾರ ರಾತ್ರಿ […]