ಬಲಿಷ್ಠ ಮತ್ತು ಸಮೃದ್ಧ ಉಡುಪಿಯ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಕಾರ್ಯೋನ್ಮುಖರಾಗಿ: ಸಚಿವ ಸುನೀಲ್ ಕುಮಾರ್
ಉಡುಪಿ: ಉಡುಪಿ ಜಿಲ್ಲೆ ರಚನೆಯಾಗಿ 25 ವರ್ಷಗಳಾಗಿದ್ದು, ಮುಂದಿನ 25 ವರ್ಷಗಳಲ್ಲಿ, ಜಿಲ್ಲೆಯನ್ನು ಎಲ್ಲಾ ಆಯಾಮಗಳಲ್ಲಿ ಅಭಿವೃದ್ಧಿ ಪಡಿಸುವ ಯೋಜನೆಗಳ ಕುರಿತಂತೆ ದಿಕ್ಸೂಚಿಯನ್ನು ರಚಿಸಿ, ಅದರಂತೆ ಕಾರ್ಯನಿರ್ವಹಿಸುವ ಮೂಲಕ ಬಲಿಷ್ಠ ಮತ್ತು ಸಮೃದ್ಧ ಉಡುಪಿ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರೂ ಕಾರ್ಯನಿರ್ವಹಿಸಬೇಕಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು. ಅವರು ಶನಿವಾರ ಪುರಭವನದಲ್ಲಿ, ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ನಡೆದ ಉಡುಪಿ ಜಿಲ್ಲಾ ರಜತ ಮಹೋತ್ಸವದ ಅಂಗವಾಗಿ ದಿಕ್ಸೂಚಿ […]